Advertisement
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ,ಕರ್ನಾಟಕ ಗೃಹ ಕಾರ್ಮಿಕರ ಒಕ್ಕೂಟ ಹಾಗೂ ಡಾನ್ ಬಾಸ್ಕೊ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಗೃಹ ಕಾರ್ಮಿಕರ ಒಕ್ಕೂಟ-2018, ಪೊಲೀಸ್ ದೂರು ಪ್ರಾಧಿಕಾರ ಹಾಗೂ ಸಂತ್ರಸ್ತರ ಪರಿಹಾರ ನಿಧಿ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಶ್ರೀ ನಾಮದೇವ ಕೆ. ಸಾಲಮಂಟಪಿ ಮಾತನಾಡಿದರು. ಕಾರ್ಮಿಕ ನಿರೀಕ್ಷಕ ಶಿವಶಂಕರ ಬಿ. ತಳವಾರ ಕಾರ್ಮಿಕರ ಕುರಿತು, ಎಸ್‌ಐಆರ್‌ಡಿಯ ಶಾರದಾ ಅಡಕಿ ಮಹಿಳೆಯರ ಹಕ್ಕುಗಳ ಕುರಿತು ಮಾತನಾಡಿದರು. ವಕೀಲರಾದ ಬಿ.ಜಿ. ಪಾಟೀಲ ಪೊಲೀಸ್ ದೂರು ಪ್ರಾಧಿಕಾರ ಮತ್ತು ಸಂತ್ರಸ್ತರ ಪರಿಹಾರ ನಿಧಿಕುರಿತು ತಿಳಿಸಿದರು.
ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರ್‌ಸಿಂಗ್ ಠಾಕೂರ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ಶಾಂತಪ್ಪ ಎಸ್. ಖಾನಹಳ್ಳಿ, ಸಂಘದ ಸಹ ಕಾರ್ಯದರ್ಶಿಗಳಾದ ಭೀಮರಡ್ಡಿ ಅಚ್ಚೋಲಾ, ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾದರ್ ಜಿ., ಕಲಬುರಗಿ ಡಾನ್ ಬಾಸ್ಕೊ ಮಕ್ಕಳ ಸಹಾಯವಾಣಿ ನಿರ್ದೇಶಕ ಫಾದರ್ ಸಜಿತ್, ಕರ್ನಾಟಕ ಗೃಹ ಕಾರ್ಮಿಕರ ಒಕ್ಕೂಟದ ಸಹ ಸಂಯೋಜಕಿ ಸಿಸ್ಟರ್ ಅಂತೋನಿ ಮೇರಿ ಉಪಸ್ಥಿತರಿದ್ದರು.
ಸಿಸ್ಟರ್ ರೀನಾ ಡಿಸೋಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಣಪ್ಪ ಸಿ. ಅಮರಾಪುರ ಸ್ವಾಗತಿಸಿದರು. ಮಕ್ಕಳ ಸಹಾಯವಾಣಿ ಸಂಯೋಜಕ ಶರಬಯ್ಯ ಎಸ್. ಕಲಾಲ್ ನಿರೂಪಿಸಿದರು.