Advertisement

ಅನರ್ಹರೇ ಅನುದಾನಕ್ಕೆ ಅರ್ಹರು: ಕೈ ಶಾಸಕರ ಅಳಲು

11:00 PM Sep 18, 2019 | Lakshmi GovindaRaju |

ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿರುವ 17 ಅನರ್ಹ ಶಾಸಕರ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷ ಅನುದಾನ ಬಿಡುಗಡೆ ಮಾಡಿರುವುದು ಕಾಂಗ್ರೆಸ್‌ ಶಾಸಕರ ಹೊಟ್ಟೆ ಯುರಿಯುವಂತೆ ಮಾಡಿದೆ.

Advertisement

ಅನರ್ಹ ಶಾಸಕರು ಅನುದಾನ ಪಡೆಯಲು ಅರ್ಹರಾಗಿದ್ದಾರೆ. ಆದರೆ, ಪಕ್ಷದಲ್ಲಿ ಉಳಿದು ಅರ್ಹರಾಗಿದ್ದರೂ, ಅನುದಾನ ಪಡೆಯಲು ಅನರ್ಹರಾಗಿದ್ದೇವೆ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರು ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವಾಹ ಪೀಡಿತ ಕ್ಷೇತ್ರಗಳಿಗೆ ವಿಶೇಷ ಅನುದಾನದ ಹೆಸರಿನಲ್ಲಿ ನಮ್ಮ ಪಕ್ಕದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ 25 ಕೋಟಿ ಅನುದಾನ ಬಿಡುಗಡೆ ಮಾಡಿ, ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡದಿರುವುದು ಯಾವ ನ್ಯಾಯ? ಕಾಂಗ್ರೆಸ್‌ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯನ್ನೂ ಎರಡನೇ ಕಂತಿನ ಹಣ ಬಿಡುಗಡೆ ಮಾಡಿಲ್ಲ.

ಪ್ರತಿಪಕ್ಷಗಳ ಶಾಸಕರಿಗೆ ಅನುದಾನವೇ ನೀಡದಿದ್ದರೆ, ಶಾಸಕರಾಗಿ ಕ್ಷೇತ್ರದ ಜತೆಗೆ ಏನು ಉತ್ತರ ಕೊಡುವುದು. ಈ ರೀತಿ ಮಾಡಿದರೆ, ನಮ್ಮ ಕ್ಷೇತ್ರಗಳ ಜನರು ನಮ್ಮ ಬಗ್ಗೆ ಏನೆಂದುಕೊಳ್ಳುತ್ತಾರೆ? ರಾಜ್ಯ ಸರ್ಕಾರದ ಈ ತೀರ್ಮಾನದ ವಿರುದ್ಧ ಕಾಂಗ್ರೆಸ್‌ನಿಂದ ದೊಡ್ಡಮಟ್ಟದಲ್ಲಿ ಹೋರಾಟ ರೂಪಿಸಬೇಕು ಎಂದು ಶಾಸಕರು ನಾಯಕರನ್ನು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next