Advertisement

ವಿದ್ಯಾರ್ಥಿಗಳಲ್ಲಿ ಗಣಿತದ ಭಯ ಹೋಗಲಾಡಿಸಿ

11:24 AM Sep 07, 2018 | Team Udayavani |

ಮೈಸೂರು: ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳಲ್ಲಿ ಮನೆ ಮಾಡಿರುವ ಭಯವನ್ನು ಶಿಕ್ಷಕರು ಹೋಗಲಾಡಿಸಬೇಕು ಎಂದು ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಟಿ.ಕೆ.ಉಮೇಶ್‌ ಹೇಳಿದರು.

Advertisement

ಮೈಸೂರು ವಿಶ್ವವಿದ್ಯಾನಿಲಯದ ಜ್ಞಾನಾಭಿವೃದ್ಧಿ ಸಮಿತಿ ವತಿಯಿಂದ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಪ್ರೌಢಶಾಲಾ ವಿಜ್ಞಾನ ಮತ್ತು ಗಣಿತ ಶಿಕ್ಷಕರಿಗೆ ಆಯೋಜಿಸಿರುವ ಮೂರು ದಿನಗಳ ಪುನಶ್ಚೇತನ ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಮಾನವನ ಸರ್ವತೋಮುಖ ಬೆಳವಣಿಗೆಗೆ ಗಣಿತವೂ ಅಗತ್ಯವಾಗಿದ್ದು, ವಿಜ್ಞಾನ ಮತ್ತು ಗಣಿತ ವಿಷಯಗಳ ಬಗೆಗಿನ ಭಯವನ್ನು ಶಿಕ್ಷಕರು ಹೋಗಲಾಡಿಸಬೇಕು ಎಂದರು.

ವಿಜ್ಞಾನದ ಕುರಿತು ವಿಶೇಷ ಆಸಕ್ತಿ ಬರುವ ಹಾಗೆ ಮನವರಿಕೆ ಮಾಡಿಕೊಡಬೇಕು. ಶಿಕ್ಷಕರು ಇಂಥಹ ಕಾರ್ಯಾಗಾರಗಳಿಂದ ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡು ಸೃಜನಶೀಲತೆಯಿಂದ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋಧಿಸಬೇಕು. ವಿಷಯಗಳನ್ನು ಸರಳವಾಗಿ ಮನನ ಮಾಡಿಸಬೇಕು. ವಿಜ್ಞಾನದಲ್ಲಿ ಪ್ರಾಯೋಗಿಕ ಬೋಧನೆ ಬಹಳ ಮುಖ್ಯವಾಗಿದ್ದು, ಅವರಿಗೆ ಪ್ರಯೋಗದತ್ತ ವಿಶೇಷ ಆಸಕ್ತಿ ಬೆಳೆಯುವಂತೆ ಮಾಡಬೇಕು.

ಮಕ್ಕಳ ಬೌದ್ಧಿಕ ಬೆಳವಣಿಗೆಯ ಕುರಿತೂ ಕಾಳಜಿ ವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಜಿ.ಎಸ್‌.ಪ್ರಭುಸ್ವಾಮಿ, ಹರಿಪ್ರಸಾದ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next