Advertisement

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

11:53 AM May 20, 2022 | Team Udayavani |

ಟೊರೊಂಟೋ: ಕೆನಡಾ ಸಂಸತ್ತಿನಲ್ಲಿ ಕನ್ನಡ ಕಲರವ ಕೇಳಿಸಿದೆ! ಹೌದು, ಕೆನಡಾ ಸಂಸತ್ತಿನ ಸಂಸದ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಎಂಬು ವರು ಕನ್ನಡದಲ್ಲೇ ಭಾಷಣ ಮಾಡುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ. ಈ ಬಗ್ಗೆ ಅವರೇ ಟ್ವೀಟ್‌ ಮಾಡಿದ್ದಾರೆ.

Advertisement

ಇದನ್ನೂ ಓದಿ:ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಚಂದ್ರ ಆರ್ಯ ಅವರು ಹೇಳಿದ್ದು ಇಷ್ಟು.. : “‘ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್‌ ಸದಸ್ಯನಾಗಿ ಆಯ್ಕೆಯಾಗಿ ಮುದ್ದು ಕನ್ನಡದಲ್ಲಿ ಮಾತನಾಡುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ.

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ, ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜಕುಮಾರ್‌ ಹಾಡಿರುವ ಭಾವಗೀತೆಯ ಕೆಲವು ಸಾಲುಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇವೆ. ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀನು ಕನ್ನಡಿಗನಾಗಿರು”.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next