Advertisement

Ello Jogappa Ninna Aramane Movie; ಜೋಗಪ್ಪನಿಗೆ ಮೊದಲ ಹಾಡಿನ ಸಂಭ್ರಮ

05:11 PM Sep 09, 2024 | Team Udayavani |

ಹೊಸಬರ “ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. “ಹೌದ ಹುಲಿಯಾ..’ ಎಂಬ ಮಾಸ್‌ ಸಾಂಗ್‌ ರಿಲೀಸ್‌ ಆಗಿದ್ದು, ರವೀಂದ್ರ ಮುದ್ದಿ ಸಾಹಿತ್ಯ ಒದಗಿಸಿದ್ದಾರೆ. ಶಿವೋಂ ಸಂಗೀತವಿದ್ದು, ರವೀಂದ್ರ ಸೊರಗ್ವಿ, ವಿಶಾಕ್‌ ನಾಗಲಾಪುರ, ಶಿವೋಮ್‌ ಧ್ವನಿಯಾಗಿದ್ದಾರೆ. ಉತ್ತರ ಕರ್ನಾಟಕ ಭಾಷೆಯಲ್ಲಿ ಮೂಡಿಬಂದಿರುವ ಹಾಡಿಗೆ ನಾಯಕ ಅಂಜನ್‌ ನಾಗೇಂದ್ರ ಬೊಂಬಾಟ್‌ ಆಗಿ ಹೆಜ್ಜೆ ಹಾಕಿದ್ದಾರೆ. ಹಯವದನ ಈ ಸಿನಿಮಾದ ನಿರ್ದೇಶಕರು.

Advertisement

ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರಂತೆ. ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ “ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್‌ ನಡೆಸಿದ್ದಾರೆ. ಈ ಚಿತ್ರ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ.

ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್‌ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸಿದ್ದು, ಸಂಜನಾ ದಾಸ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಸ್ವಾತಿ, ದಾನಪ್ಪ, ದಿನೇಶ್‌ ಮಂಗಳೂರು, ಬಿರಾದಾರ್‌ ತಾರಾಬಳಗದಲ್ಲಿದ್ದಾರೆ. ಪವನ್‌ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next