Advertisement

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

01:29 AM Apr 29, 2024 | Team Udayavani |

ಬೀಜಿಂಗ್‌: ಭಾರತಕ್ಕೆ ಭೇಟಿ ನೀಡುವುದನ್ನು ಮುಂದೂಡಿದ ಬೆನ್ನಲ್ಲೇ ಟೆಸ್ಲಾ ಮುಖ್ಯಸ್ಥ ಎಲಾನ್‌ ಮಸ್ಕ್ ರವಿವಾರ ಚೀನ ಪ್ರವಾಸ ಕೈಗೊಂಡಿದ್ದಾರೆ. ಸ್ವಯಂಚಾಲಿತ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗಿರುವ ಟೆಸ್ಲಾಗೆ ಆವಶ್ಯಕ ಮಾಹಿತಿ ಸಂಗ್ರಹದ ಕುರಿತಾಗಿ ಮಸ್ಕ್ ಚೀನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಟೆಸ್ಲಾದ ಕಾರುಗಳಿಗೆ ಚೀನ ಪ್ರಮುಖ ಮಾರುಕಟ್ಟೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ವತಃ ಮಸ್ಕ್ ಚೀನ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಸಂಪೂರ್ಣ ಸ್ವಯಂ ಚಾಲಿತ ಕಾರುಗಳನ್ನು ಚೀನದ ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಮಸ್ಕ್ ಘೋಷಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next