Advertisement

ಭರವಸೆಗಳ ಸಾಕಾರ ಸಂಭ್ರಮ ಶುರು

01:09 PM Oct 23, 2017 | Team Udayavani |

ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಬೆಳಗಾವಿ ವಿಭಾಗ ಮಟ್ಟದ ಸೌಲಭ್ಯಗಳ ವಿತರಣಾ ಸಮಾವೇಶ ಹಾಗೂ ಮಾಹಿತಿ ಉತ್ಸವ-2017ಕ್ಕೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ಚಾಲನೆ ನೀಡಿದರು. 

Advertisement

ರವಿವಾರ ಸಂಜೆ 6:30ಕ್ಕೆ ಕೃಷಿ ವಿವಿಯ ಕ್ರೀಡಾಂಗಣದ ಮೈದಾನದಲ್ಲಿ ಹಾಕಿರುವ ಭವ್ಯ ವೇದಿಕೆಯಲ್ಲಿ ಭರವಸೆಗಳ ಸಾಕಾರ ಸಂಭ್ರಮದ ನಿಮಿತ್ತ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು.

ಇದಕ್ಕೂ ಮುನ್ನ ಸಚಿವರಾದ ಆರ್‌.ವಿ.ದೇಶಪಾಂಡೆ, ಎಚ್‌.ಕೆ. ಪಾಟೀಲ್‌, ಎಂ.ಬಿ. ಪಾಟೀಲ್‌, ವಿನಯ್‌ ಕುಲಕರ್ಣಿ ಹಾಗೂ ರುದ್ರಪ್ಪ ಲಮಾಣಿ ಅವರು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಬಿತ್ತರಿಸುವ ಎಲ್‌ಇಡಿ ಫಲಕಗಳನ್ನು ಒಳಗೊಂಡ ಮಳಿಗೆಗಳನ್ನು ಉದ್ಘಾಟಿಸಿದರು. 

ಬೆಳಗಾವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಕಾರವಾರ, ಗದಗ ಹಾಗೂ ಹಾವೇರಿ ಜಿಲ್ಲೆಯ ಮಾಹಿತಿ ಮಳಿಗೆಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರದಿಂದ ಅನುಷ್ಠಾನಗೊಂಡಿರುವ ಅಭಿವೃದ್ಧಿ ಯೋಜನೆಗಳ ವಿವರಗಳನ್ನೊಳಗೊಂಡ ಮಾಹಿತಿ ಫಲಕ ಹಾಗೂ ದೃಶ್ಯಾವಳಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರದರ್ಶಿಸಲಾಗಿದೆ. 

ಈ ಸಂದರ್ಭದಲ್ಲಿ ಶಾಸಕರಾದ ಪ್ರಸಾದ್‌ ಅಬ್ಬಯ್ಯ, ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಕಳಸದ, ಮಾಜಿ ಶಾಸಕ ವಿ.ಎಸ್‌. ನಂಜಯ್ಯನಮಠ, ಹಾವೇರಿ ಜಿಪಂನ ಅಧ್ಯಕ್ಷ ಕೊಟ್ರೇಶಪ್ಪ ಬಸಗೆಣ್ಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜೀವಕುಮಾರ್‌ ನೀರಲಗಿ,

Advertisement

-ವಾರ್ತಾ ಇಲಾಖೆಯ ನಿರ್ದೇಶಕರಾದ ಹರ್ಷ, ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ ಸೇರಿದಂತೆ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅ ಧಿಕಾರಿಗಳು, ವಿಭಾಗ ಹಾಗೂ ಜಿಲ್ಲಾ ಮಟ್ಟದ ಅ ಧಿಕಾರಿಗಳು ಇದ್ದರು. 

ಸಚಿವೆ ಉಮಾಶ್ರೀ ಗೈರು: ಏಳೂ ಜಿಲ್ಲೆಗಳ ಉಸ್ತುವಾರಿ ಸಚಿವರು ಮಳಿಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಿರಬೇಕಿತ್ತು. ಆದರೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೈರು ಹಾಜರಾಗಿದ್ದರು. ಈ ಕುರಿತು ಮಾತನಾಡಿದ ಸಚಿವ ಆರ್‌.ವಿ. ದೇಶಪಾಂಡೆ, ಉಮಾಶ್ರೀ ಅವರಿಗೆ ಅನಾರೋಗ್ಯ ನಿಮಿತ್ತ ಬಂದಿಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು. 

ಪೊಲೀಸ್‌ ಬಂದೋಬಸ್ತ್: ಫಲಾನುಭವಿ ಗಳ ಈ ಕಾರ್ಯಕ್ರಮದಲ್ಲಿ 30 ಸಾವಿರ ಜನ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, 2 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು ಅನುಕೂಲವಾಗುವಂತೆ ಬಿಗಿ ಪೊಲೀಸ್‌ ಬಂದೋಬಸ್ತ್ಗೆ ವ್ಯವಸ್ಥೆ ಮಾಡಲಾಗಿದೆ. ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿನ ಹಿರಿಯ ಪೊಲೀಸ್‌ ಅಧಿಕಾರಿಗಳು, ಇನ್ಸ್‌ಪೆಕ್ಟರ್‌ಗಳು ಸೋಮವಾರ ಬೆಳಗ್ಗೆಯೇ ಕೃಷಿ ವಿವಿಯಲ್ಲಿ ಹಾಜರಾಗಲಿದ್ದಾರೆ.   

Advertisement

Udayavani is now on Telegram. Click here to join our channel and stay updated with the latest news.

Next