Advertisement
ಸೋಮವಾರ ನಡೆದ ಪಿಇಎಸ್ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ದೇಶದಲ್ಲಿ ತಂತ್ರಜ್ಞಾನ ಬೆಳವಣಿಗೆ ಹೊಂದುತ್ತಿದ್ದು, ಅದಕ್ಕೆ ತಕ್ಕಂತೆ ನಾವು ಕೂಡ ಬದಲಾಗಬೇಕಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಸೃಷ್ಟಿಯಾಗಲಿದ್ದು, ಯುವ ಜನತೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.
Related Articles
Advertisement
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಮಾಜದಲ್ಲಿ ಎದುರಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಕಡೆ ಆಲೋಚಿಸಬೇಕು. ಇಂದು ನಮ್ಮ ದೇಶದಲ್ಲಿ ವಾತಾವರಣ ಬದಲಾವಣೆಯಾಗುತ್ತಿದೆ. ಜನ ಸಂಖ್ಯೆ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ರೀತಿ ಹತ್ತು ಹಲವು ಸಮಸ್ಯೆಗಳಿದ್ದು, ಇದಕ್ಕೆ ಪರಿಹಾರ ಕಲ್ಪಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ಆರೋಗ್ಯದ ಕಡೆಗೂ ಗಮನ ನೀಡಬೇಕು. ಜಂಕ್‌ಫುಡ್‌ಗಳ ಸೇವನೆ ಬಿಡಬೇಕು. ನಮ್ಮ ಅಹಾರ ಪದ್ಧತಿಯನ್ನೇ ಮುಂದುವರಿಸುತ್ತಾ, ಪ್ರತಿ ನಿತ್ಯ ಯೋಗ, ವಾಕಿಂಗ್ ರೂಢಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಪಿಇಎಸ್ ವಿಶ್ವವಿದ್ಯಾಲಯವು ಡಿಆರ್‌ಡಿಒ, ಇಸ್ರೋ ಜತೆ ಸೇರಿ ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿದೆ. ಡ್ರೋನ್ ಟೆಕ್ನಾಲಜಿ ಕೋರ್ಸ್ ಪರಿಯಚಿಸುತ್ತಿರುವುದು ಖುಷಿಯ ವಿಚಾರ ಎಂದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ದೇಶವು ವಿಕಾಸದ ಹಾದಿಯಲ್ಲಿದೆ. ಭವಿಷ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಎನ್‌ಇಪಿಯನ್ನು ಅನುಷ್ಠಾನ ಮಾಡುವ ಮೂಲಕ ನಮ್ಮ ರಾಜ್ಯ ಪ್ರಥಮ ರಾಜ್ಯ ಎಂಬ ಪಟ್ಟಿಯಲ್ಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಇದೇ ವೇಳೆ 22 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು 59 ಬೆಳ್ಳಿ ಪದಕ ಸೇರಿದಂತೆ ಪಿಎಚ್.ಡಿ, ಎಂ.ಟೆಕ್ ಕೋರ್ಸ್‌ಗಳಲ್ಲಿ ಒಟ್ಟಾರೆ 2,249 ವಿದ್ಯಾರ್ಥಿಗಳು ಪದವಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಪಿಇಎಸ್ ವಿವಿ ಕುಲಾಧಿಪತಿ ಎಂ.ಆರ್.ದೊರೆಸ್ವಾಮಿ, ಕುಲಪತಿ ಡಾ .ಜೆ. ಸೂರ್ಯ ಪ್ರಸಾದ್, ಕುಲಸಚಿವ ಡಾ. ಕೆ.ಎಸ್ .ಶ್ರೀಧರ್ ಉಪಸ್ಥಿತರಿದ್ದರು.