ಸಿಂದಗಿ: 1975 ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೆ ತಂದ ಅವಧಿ ಯನ್ನು ದೇಶಾದ್ಯಂತ ಕರಾಳ ದಿನ ಆಚರಣೆ ಮಾಡಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸಂಚಾಲಕ ಮುತ್ತು ಶಾಬಾದಿ ಹೇಳಿದರು.
ಶುಕ್ರವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಆಚರಿಸಿದ ಕರಾಳ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತುರ್ತು ಪರಿಸ್ಥಿತಿ 21 ತಿಂಗಳು ದೇಸಾದ್ಯಂತ ಜಾರಿಯಲ್ಲಿದ್ದು ಮಾರ್ಚ್ 21, 1977ರವರೆಗೆ ಮುಂದುವರಿಯಿತು. ಜಯಪ್ರಕಾಶ ನಾರಾಯಣ ಅವರ ಕರೆಗೆ ಓಗೊಟ್ಟು ದೇಶದ ಜನರು ತಿರುಗಿ ಬೀಳುತ್ತಾರೆ ಎಂದು ಭಾವಿಸಿದ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿಗೆ ತಂದರು.
ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿಯವರು ಸಂವಿಧಾನ 352(1)ನೇ ವಿಧಿ ಪ್ರಕಾರ ಆಂತರಿಕ ಕಠಿಣ ಪರಿಸ್ಥಿತಿ ಕಾರಣ ನೀಡಿ ಇದಕ್ಕೆ ಅ ಧಿಕೃತವಾಗಿ ಒಪ್ಪಿಗೆ ನೀಡಿದರು. ಈ ವೇಳೆ ನಾಗರಿಕ ಹಕ್ಕುಗಳನ್ನು ನಿಷೇಧಿ ಸಲಾಯಿತು ಎಂದು ಹೇಳಿದರು. ಗಾಂಧಿ ವಾದಿಗಳು ಜೈಲು ಶಿಕ್ಷೆ ಅನುಭವಿಸಿದರು. ಮಾಧ್ಯಮದ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ರಾಜಕೀಯ, ಸಾಮಾಜಿಕ ಅನಿಶ್ಚಿತತೆ ಉಂಟಾಗಿತ್ತು. ಈ ದಿನವನ್ನು ಸ್ಮರಿಸಿಕೊಂಡಿರುವ ಕರಾಳ ದಿನ ಆಚರಿಸಲಾಗುತ್ತಿದೆ.
ಭಾರತದ ಪ್ರಜಾಪ್ರಭುತ್ವ ನೀತಿಗಳನ್ನು ಮೆಟ್ಟಿ ನಿಂತು ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೇ ಇತ್ತು. ಆದರೆ ಅದರಲ್ಲಿ ಯಶಸ್ವಿಯಾಗಲಿಲ್ಲ, ತುರ್ತು ಪರಿಸ್ಥಿತಿಯನ್ನು ವಿರೋ ಧಿಸಿ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಲ್ಲ ಶ್ರೇಷ್ಠರನ್ನು ನಾವು ನೆನಪಿಸಿಕೊಳ್ಳೋಣ ಎಂದರು. ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಶಂಭುಲಿಂಗ ಕಕ್ಕಳಮೇಲಿ, ಕರ್ನಾಟಕ ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಚಂದ್ರಶೇಖರ ನಾಗೂರ ಮಾತನಾಡಿ, ಒಂದು ಕುಟುಂಬದ ವಿರುದ್ಧದ ಧ್ವನಿಯನ್ನು ಹತ್ತಿಕ್ಕಲು ತುರ್ತು ಪರಿಸ್ಥಿತಿ ಸ್ವತಂತ್ರ ಭಾರತದ ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿದೆ.
21 ತಿಂಗಳ ಕಾಲ ನಿರ್ದಯ ಆಡಳಿತದ ಕ್ರೂರ ಚಿತ್ರಹಿಂಸೆ ಅನುಭವಿಸುತ್ತಿರುವಾಗ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಪಟ್ಟುಬಿಡದೆ ಹೋರಾಡಿದ ಎಲ್ಲ ದೇಶವಾಸಿಗಳ ತ್ಯಾಗವನ್ನು ಸ್ಮರಿಸೋಣ ಎಂದರು. ಶ್ರೀಶೈಲ ಯಳಮೇಲಿ, ಶ್ಯಾಮ ಪೂಜಾರಿ, ಬಾಬು ಬಿರಾದಾರ, ರಾಹುಲ್ ತಳವಾರ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.