Advertisement

Congressನಿಂದ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿ :ಸಿಮೆಂಟ್‌ ಮಂಜು ಆರೋಪ

01:12 AM Jul 21, 2024 | Team Udayavani |

ಉಡುಪಿ: ವಿಪಕ್ಷಗಳ ಪ್ರತಿಭಟನೆ ಹಕ್ಕನ್ನು ಕಸಿದು ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಲಾಗಿದೆ. ಕಾಂಗ್ರೆಸ್‌ನ ಭ್ರಷ್ಟಾಚಾರದ ವಿರುದ್ಧ ಪ್ರತಿ ಬೂತ್‌ನಲ್ಲೂ ಜನಜಾಗೃತಿ ಮೂಡಿಸಬೇಕು. ರಾಜ್ಯದಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನವನ್ನು ಲೂಟಿ ಮಾಡಿ ಕಾಂಗ್ರೆಸ್‌ ಲೋಕಸಭಾ ಚುನಾವಣೆ ಗೆದ್ದಿದ್ದು, ಭ್ರಷ್ಟಾಚಾರ ಕಣ್ಣ ಮುಂದೆ ನಡೆಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಮುಚ್ಚಿ ಕೂತಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್‌ ಮಂಜು ಆರೋಪಿಸಿದ್ದಾರೆ.

Advertisement

ಹೊಟೇಲ್‌ ಶಾರದಾ ಇಂಟರ್‌ನ್ಯಾಷನಲ್‌ನಲ್ಲಿ ಶನಿವಾರ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಬಹುಸಂಖ್ಯಾಕರ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದರು.

2047ಕ್ಕೆ ಭಾರತ ವಿಶ್ವಗುರು

ಜಿಲ್ಲಾ ಬಿಜೆಪಿಯಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಡಾ| ಧನಂಜಯ ಸರ್ಜಿ, ಭಾರತವು ಜಗತ್ತಿನಲ್ಲೇ ಪ್ರಮುಖ ಆರ್ಥಿಕ ಶಕ್ತಿಯಾಗುತ್ತಿದ್ದು, 2047ರಲ್ಲಿ ವಿಶ್ವ ಗುರುವಾಗಲಿದೆ. ಆರು ದಶಕಗಳ ಆಡಳಿತದಲ್ಲಿ ಕಾಂಗ್ರೆಸ್‌ನ ಬಡತನವಷ್ಟೇ ನಿವಾರಣೆಯಾಗಿದೆ  ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಅಧ್ಯಕ್ಷತೆ ವಹಿಸಿ, ಭವಿಷ್ಯದಲ್ಲಿ ಎದುರಾಗುವ ಚುನಾವಣೆ ಬಗ್ಗೆ ಸಂಘಟನಾತ್ಮಕವಾಗಿ ಸಿದ್ಧವಾಗಲು ತಿಳಿಸಿದರು.

Advertisement

ಶಾಸಕರಾದ ಯಶಪಾಲ್‌ ಎ.ಸುವರ್ಣ, ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ್‌ ಗಂಟಿಹೊಳೆ, ಮಾಜಿ ಶಾಸಕ ಲಾಲಾಜಿ ಆರ್‌.ಮೆಂಡನ್‌, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ್‌ ಕುಮಾರ್‌ ಶೆಟ್ಟಿ, ಜಿಲ್ಲಾ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಉಪಸ್ಥಿತರಿದ್ದರು.

ಇತ್ತೀಚೆಗೆ ನಿಧನ ಹೊಂದಿದ ಸಂಘ ಪರಿವಾರ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪ್ರಿಯದರ್ಶಿನಿ ಅವರು ಮೃತರ ಹೆಸರುಗಳನ್ನು ವಾಚಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ, ರೇಶ್ಮಾ ಉದಯ ಶೆಟ್ಟಿ ನಿರೂಪಿಸಿದರು. ಉದಯ ಎಸ್‌.ಕೋಟ್ಯಾನ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next