Advertisement

ತುರ್ತು ಪರಿಸ್ಥಿತಿ ಅಣುಕು ಪ್ರದರ್ಶನ

04:48 PM Feb 22, 2020 | Team Udayavani |

ದೇವನಹಳ್ಳಿ: ಯಾವುದೇ ಅಗ್ನಿ ಅವಘಡಗಳು ಸಂಭವಿಸಿದಾಗ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ, ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಬಹುದೆಂದುಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಅಧಿಕಾರಿ ತಿಳಿಸಿದರು.

Advertisement

ತಾಲೂಕಿನ ಚನ್ನರಾಯಪಟ್ಟಣ ಹೋಬಳಿ, ಭಟ್ಟರಮಾರೇನಹಳ್ಳಿ ಗ್ರಾಮದಲ್ಲಿ ಇಂಡಿಯನ್‌ಆಯಿಲ್‌ ಕಾರ್ಪೊàರೇಷನ್‌ ವತಿಯಿಂದ ಹಮ್ಮಿಕೊಂಡಿದ್ದ ತುರ್ತು ಪರಿಸ್ಥಿತಿ ಅಣುಕು ಪ್ರದರ್ಶನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವಘಡಗಳು ಸಂಭವಿಸಿದಾಗ ಸಾರ್ವಜನಿಕರು ತಕ್ಷಣ ಹತ್ತಿರದ ಪೊಲೀಸ್‌ ಠಾಣೆ ಹಾಗೂ ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದರೆ, ದೊಡ್ಡ ಮಟ್ಟದ ಅನಾಹುತವನ್ನು ತಪ್ಪಿಸಬಹುದು ಎಂದರು.

ದೇವನಹಳ್ಳಿ ಅಗ್ನಿಶಾಮಕ ದಳದ ಅಧಿಕಾರಿ ನಾಗೇಶ್‌ ಮಾತನಾಡಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೇವನಗೊಂದಿಯಿಂದ ಪೈಪ್‌ಲೈನ್‌ ಹಾದು ಹೋಗಿದೆ.ಇದರ ಬಗ್ಗೆ ಜಾಗೃತಿ ಮೂಡಿಸಿದರೆ ಗ್ರಾಮೀಣ ಭಾಗದ ರೈತಾಪಿ ವರ್ಗದವರು ಎಚ್ಚೆತ್ತು ಕೊಳ್ಳುತ್ತಾರೆ.ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಮಾಡುವು ದರಿಂದ ಎಲ್ಲರಿಗೂ ಅನುಕೂಲ ಎಂದರು.

ಈ ಸಂದರ್ಭದಲ್ಲಿ ಇಂಡಿಯನ್‌ ಆಯಿಲ್‌ ಕಾರ್ಪೊàರೇಷನ್‌ ಅಧಿಕಾರಿ ಯೋಗೇಂದ್ರ, ತಾಪಂ ಸದಸ್ಯ ಮುನೇಗೌಡ, ಚನ್ನರಾಯಪಟ್ಟಣ ಪಿಎಸ್‌ಐ ಹೊನ್ನೇಗೌಡ, ಗಂಗವಾರ ಚೌಡಪ್ಪನಹಳ್ಳಿ ಮಾಜಿ ಅಧ್ಯಕ್ಷ ಜಯರಾಮೇಗೌಡ, ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ , ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಸಿಬ್ಬಂದಿ ಸೇರಿದಂತೆ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next