Advertisement

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

11:56 PM Jan 09, 2025 | Team Udayavani |

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿಯಿರುವ ತುರ್ತು ಚಿಕಿತ್ಸಾ ವೈದ್ಯರು ಮತ್ತು ಅಪಘಾತ ವೈದ್ಯಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಶುಭಂ ಶುಕ್ಲ ಸೂಚಿಸಿದ್ದಾರೆ.

Advertisement

ಜಿಲ್ಲೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮಂಜೂರಾದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ನಿಯಮಗಳನ್ವಯ 6 ವರ್ಷ ಗ್ರಾಮೀಣ ಸೇವೆ ಪೂರೈಸಿದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಿಸಲು ಅವಕಾಶವಿದೆ. ಆದರೆ ಸೂಕ್ತ ವೈದ್ಯಕೀಯ ಅಧಿಕಾರಿಗಳು ಲಭ್ಯವಾಗುವವರೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಲು ಅವಕಾಶವಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next