Advertisement

ತುರ್ತು ಸಂದರ್ಭದಲ್ಲಿ ಅಗತ್ಯ ಆರೋಗ್ಯ ಸೇವೆ:ಲಕ್ಷ್ಮೀಪ್ರಿಯಾ

02:57 AM May 06, 2019 | Team Udayavani |

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಯುನೆಸೆಫ್ ವತಿಯಿಂದ ಶನಿವಾರ ಸಮಗ್ರ ಕೊಡಗು ಸ್ಪಂದನಾ ಯೋಜನೆ ಕುರಿತು ವಿಚಾರ ಸಂಕಿರಣವು ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿತು.

Advertisement

ವಿಚಾರ ಸಂಕಿರಣಕ್ಕೆ ಚಾಲನೆ ನೀಡಿದ ಮಾತನಾಡಿದ ಜಿ.ಪಂ.ಸಿಇಒ ಕೆ.ಲಕ್ಷಿಪ್ರಿಯಾ ಅವರು ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಗತ್ಯ ತುರ್ತು ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು ಎಂದು ಅವರು ತಿಳಿಸಿದರು.

ವೈದ್ಯಕೀಯ ಕಾಲೇಜಿನ ವೈದ್ಯರು, ಶ್ರುಶ್ರೂಷಕರು, ಹೀಗೆ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಪ್ರಕೃತಿ ವಿಕೋಪ ನಿರ್ವಹಣೆ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಅತೀ ಅಗತ್ಯವಾಗಿದೆ. ಜಿಲ್ಲೆಯ ಎಲ್ಲಾ ಶುಶ್ರೂಷಕರು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದರು.

ಅತಿವೃಷ್ಟಿ ಸಂದರ್ಭದಲ್ಲಿ ಸಂತ್ರಸ್ತರಿಗೆ ಆತ್ಮಸ್ಥೆçರ್ಯ ಮತ್ತು ಮನೋಸ್ಥೆçರ್ಯ ತುಂಬುವುದು. ಮಾನಸಿಕವಾಗಿ ಕುಗ್ಗದಂತೆ ನೋಡಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಅವರು ತಿಳಿಸಿದರು. ಯುನೆಸೆಫ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಪ್ರಭಾತ್‌ ಅವರು ಮಾತನಾಡಿ ಅತಿವೃಷ್ಟಿ ಹಾಗೂ ಇತರೆ ಸಂದರ್ಭದಲ್ಲಿ ತೀವ್ರ ಹಾನಿಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಆರೋಗ್ಯ ಸೇವೆ ಕಲ್ಪಿಸುವುದು ಅಗತ್ಯ ಎಂದರು.

Advertisement

ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯರು, ಶ್ರುಶ್ರೂಷಕರು, ಅರೆ ವೈದ್ಯಕೀಯ ಸಿಬ್ಬಂದಿಗಳು ಇತರರು ಆರೋಗ್ಯ ಸೇವೆ ಕಲ್ಪಿಸುವುದು. ಈ ಸಂಬಂಧ ಪೂರ್ವ ಸನ್ನದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದು. ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಅಥವಾ ಇತರ ಸಂದರ್ಭಗಳಲ್ಲಿ ಸಮೂಹ ಅಪಘಾತ ನಿರ್ವಹಣೆ ಮಾಡುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಪ್ರಭಾತ್‌ ಅವರು ತಿಳಿಸಿದರು.

ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆ ಗಳಲ್ಲಿ ತುರ್ತು ನಿರ್ವಹಣೆ ಬಗ್ಗೆ ಗಮನಹರಿಸುವುದು ಮುಖ್ಯವಾಗಿದೆ ಎಂದು ಅವರು ತಿಳಿಸಿದರು. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಶಾಲ್‌ ವೈದ್ಯಕೀಯ ಕಾಲೇಜಿನ ಸ್ಥಾನಿಕ ವೈದ್ಯಾಧಿಕಾರಿ ಮಂಜುನಾಥ್‌ ಇತರರು ಹಲವು ಮಾಹಿತಿ ನೀಡಿದರು, ವೈದ್ಯರು ಶ್ರುಶ್ರೂಷಕರು ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next