ಮೈಸೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಹೆಚ್ಚಿನ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆಯಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು ಇಂದು ನಾವು ಆಧುನಿಕ ತಂತ್ರಜ್ಞಾನ, ಅಂತರ್ಜಾಲ ಸೇವೆ, ಸಾಮಾಜಿಕ ಮಾಧ್ಯಮಗಳನ್ನು ಹೆಚ್ಚು ಬಳಸುತ್ತಿದ್ದು, ಅಲ್ಲಿಯೂ ಅಪರಾಧಗಳು ಹುಟ್ಟಿಕೊಂಡಿವೆ. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲಿಯೂ ಸೈಬರ್ ಪೊಲೀಸ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗಿದೆ. ಇದರ ಜತೆಗೆ ಇನ್ನೂ ಹೆಚ್ಚಿನ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆಯಲಾಗುವುದು. ನಮ್ಮಲ್ಲಿನ ಆನ್‌ಸಿàನ್ ಪೊಲೀಸಿಂಗ್ ಕಡಿಮೆ ಇದೆ. ಆನ್‌ಸಿàನ್ ಕ್ರೈಂನ್ನು ಯಾವ ರೀತಿ ಡಿಟೆಕ್ಟ್ ಮಾಡಬೇಕು ಎಂಬುದರ ಬಗ್ಗೆ ತರಬೇತಿ ಕೊಡಿಸಲು ಚಿಂತಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿಯೂ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪಿಸಲಾಗುವುದು. ಜತೆಗೆ ಪ್ರತಿ ಠಾಣೆಗಳಲ್ಲೂ ಪ್ರಾಥಮಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯುವ ಚಿಂತನೆಯಿದೆ. ಸೈಬರ್ ಕ್ರೈಂ ಡಿಟೆಕ್ಷನ್ ಮಾಡುವ ಮತ್ತು ಎಫ್ಎಸ್‌ಎಲ್ ಲ್ಯಾಬ್ ನಡೆಸುವುದರ ಬಗ್ಗೆ ತರಬೇತಿ ನೀಡುವ ಕಾರ್ಯಕ್ರಮಗಳನ್ನು ಹೊಸದಾಗಿ ಮುಂದಿನ ವರ್ಷದ ಅಕಾಡೆಮಿಗಳಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.
ಮುಂದಿನ ಎರಡು ವರ್ಷಗಳಲ್ಲಿ 16 ಸಾವಿರ ಪೊಲೀಸ್ ಕಾನ್‌ಸ್ಟೆàಬಲ್ ಮತ್ತು ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳನ್ನು ಭರ್ತಿ ಮಾಡಲಾಗುವುದು. ಹಂತ, ಹಂತವಾಗಿ ಈ ಪ್ರಕ್ರಿಯೆ ನಡೆಯಲಿದೆ. ಮೊದಲ ಹಂತವಾಗಿ 6 ಸಾವಿರ ಕಾನ್‌ಸ್ಟೆàಬಲ್ ಮತ್ತು ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದೇವೆ.
– ಬಸವರಾಜ ಬೊಮ್ಮಾಯಿ, ಗೃಹ ಸಚಿವ.