Advertisement

ಡಿಜಿಟಲ್‌ ಕಲಿಕೆಗೆ ಒತ್ತು: ಡಿಸಿಎಂ

05:18 AM Jun 14, 2020 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು ಡಿಜಿಟಲ್‌ ಕಲಿಕೆಗೆ ಒತ್ತು ನೀಡುವ ಮೂಲಕ ಶೈಕ್ಷಣಿಕ ಅಸಮಾನತೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

Advertisement

ಉನ್ನತ  ಶಿಕ್ಷಣದ ಡಿಜಿಟಲೀಕರಣ- ಸವಾಲು ಮತ್ತು ಅವಕಾಶಗಳ ಕುರಿತು ಪದ್ಮಶ್ರೀ ನಿರ್ವ ಹಣಾ ಸಂಸ್ಥೆ ಹಮ್ಮಿಕೊಂಡಿದ್ದ ವೀಡಿಯೋ ಸಂವಾದದಲ್ಲಿ ಮಾತನಾಡಿ, ಸಮಾಜದ ಗುಣಮಟ್ಟದ ಶಿಕ್ಷಣವನ್ನು ಎಲ್ಲರಿಗೂ ತಲುಪಿಸಲು ಇರುವ  ಮಾರ್ಗವೇ ಡಿಜಿಟಲ್‌ ಕಲಿಕೆ. ಶೈಕ್ಷಣಿಕ ಅಸಮಾನತೆ ಹೋಗಲಾಡಿಸಲು ಇದು ಪರಿಹಾರವೂ ಆಗಿದೆ. ಕುಗ್ರಾಮದಲ್ಲಿರುವ ವಿದ್ಯಾರ್ಥಿಗಳು ಡಿಜಿಟಲ್‌ ವ್ಯವಸ್ಥೆ ಮೂಲಕ ನುರಿತ ಉಪನ್ಯಾಸಕರ ಪಾಠ ಕೇಳಲು ಅವಕಾಶವಿದೆ ಎಂದು  ಹೇಳಿದರು.

ಅಸ್ತಿತ್ವದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯ, ಸಂಸ್ಥೆಗಳ ಶ್ರೇಯಾಂಕ ಸುಧಾರಣೆ ಹಾಗೂ ಶಿಕ್ಷಣದ ಡಿಜಿಟಲೀಕರಣಗೊಳಿಸಲು ಅನುದಾನ ನೀಡಲಾಗುತ್ತದೆ. ಕೇಂದ್ರದ ಆದೇಶವನ್ನು ರಾಜ್ಯದಲ್ಲೂ ಅನುಷ್ಠಾನ  ಗೊಳಿಸುವ ಮೂಲಕ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸಿ, ಆನ್‌ಲೈನ್‌ ಕಲಿಕೆ ಸರಳಗೊಳಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next