Advertisement
ಕಳತ್ತೂರು, ಮುದರಂಗಡಿ, ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಢೆ ಮನೆ ಮನೆ ಭೇಟಿ, ಕಾರ್ಯಕರ್ತರ ಜತೆಗೆ ಸಮಾಲೋಚನೆ ಮತ್ತು ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.ನಮ್ಮ ಸಮಾಜ ಸೇವಾ ಕಾರ್ಯಗಳಿಗೆ ತಾಯಿಯ ಪ್ರೇರಣೆಯೇ ಪೂರಕವಾಗಿದೆ. ಅವರ ಇಚ್ಛೆಯಂತೆ ನಾವು ಮನೆಯಲ್ಲೇ ಗೋವುಗಳನ್ನು ಸಾಕುತ್ತಿದ್ದು ಗುರ್ಮೆ ಗೋ ವಿಹಾರಧಾಮ ಸ್ಥಾಪಿಸಿ ಅನಾಥ ಗೋವುಗಳೂ ಸೇರಿದಂತೆ ನೂರಾರು ಗೋವುಗಳಿಗೆ ರಕ್ಷಣೆ ನೀಡುತ್ತಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿಯೂ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರ ಮಾಡುವುಕ್ಕಾಗಿ ಸುಸಜ್ಜಿತ ಗೋ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದೇವೆ. ನುಡಿದಂತೆ ನಡೆದು ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬಿಜೆಪಿಯನ್ನು ಬೆಂಬಲಿಸುವಂತೆ ಅವರು ನಾವು ಬದ್ಧರಿದ್ದೇವೆ ಎಂದರು.
ಗುರ್ಮೆ ಸುರೇಶ್ ಶೆಟ್ಟಿ ಅವರು ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರು ಕುಂಜಿಗುಡ್ಡೆ ಪರಿಸರದಲ್ಲಿ ಮತಯಾಚನೆ ನಡೆಸಿದರು.
Related Articles
Advertisement
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಬಿಜೆಪಿ ವಿಕಾಸದತ್ತ ದೃಷ್ಟಿ ಮಾಡಿದ್ದರೆ, ಕಾಂಗ್ರೆಸ್ ವಿನಾಶದತ್ತ ಮುಖ ಮಾಡಿದೆ. ಬಿಜೆಪಿ ರಾಷ್ಟ್ರಧರ್ಮದ ಚಿಂತನೆಯನ್ನು ಮುಂದಿಟ್ಟುಕೊಂಡು ಮತಯಾಚನೆ ನಡೆಸುತ್ತಿದೆ. ಕ್ಷೇತ್ರದ ಜನತೆ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಬಹುಮತಗಳಿಂದ ಗೆಲ್ಲಿಸುವ ಮೂಲಕ ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರಕಾರದ ಅಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ದೊರಕಿಸಿ ಕೊಡಲು ಕೈ ಜೋಡಿಸುತ್ತಾರೆ ಎಂಬ ಭರವಸೆಯಿದೆ ಎಂದರು.
ಮುದರಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶರತ್ ಶೆಟ್ಟಿ, ಮುದರಂಗಡಿ ಶಕ್ತಿಕೇಂದ್ರ ಅಧ್ಯಕ್ಷ ಶಿವರಾಮ್ ಭಂಡಾರಿ, ಗ್ರಾ.ಪಂ. ಪೆರ್ನಾಲ್ ಬೂತ್ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಪ್ರಮುಖರಾದ ರವೀಂದ್ರ ಪ್ರಭು, ಮೋಹಿನಿ ಹೆಗ್ಡೆ, ಉದಯ್, ಬೆಳ್ಮಣ್ ಗ್ರಾ.ಪಂ. ಸದಸ್ಯ ಶಂಕರ್ ಕುಂದರ್ ಸೂಡ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಚಾರಗಳ ಪ್ರಚಾರವಾಗಬೇಕೇ ವಿನಃ ಅಪಪ್ರಚಾರವಲ್ಲಚುನಾವಣೆ ಸಂದರ್ಭದಲ್ಲಿ ವಿಚಾರಗಳ ಪ್ರಚಾರವಾಗಬೇಕೇ ಹೊರತು ಯಾರ ಬಗ್ಗೆಯೂ ಅಪಪ್ರಚಾರ ನಡೆಯ ಕೂಡದು. ಈ ಬಾರಿಯ ಚುನಾವಣೆ ಧರ್ಮ ಮತ್ತು ಅಧರ್ಮದ ನಡುವಿನ ಚುನಾವಣೆಯಾಗಿದೆ. ಇಲ್ಲಿ ಯಾರ ಬಗ್ಗೆಯೂ ಅಪಪ್ರಚಾರ ಸಲ್ಲದು. ಅಪ್ರಚಾರಕ್ಕೆ ಉತ್ತರವನ್ನೂ ಕೊಡಬಾರದು. ನಾವು ನಮ್ಮ ವಿಚಾರಗಳನ್ನು ಮುಂದಿಟ್ಟುಕೊಂಡು, ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಅಭಿವೃದ್ಧಿ ನಡೆಸುವ ಭರವಸೆಯೊಂದಿಗೆ ಚುನಾವಣೆ ಎದುರಿಸುತ್ತಿದ್ದೇವೆ. ಎದುರಾಳಿಗಳ ಅಪಪ್ರಚಾರಕ್ಕೆ ಮತದಾರರೇ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.