ಚಡಚಣ: ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಎಂದು ತಹಶೀಲ್ದಾರ್ ಸುರೇಶ ಚವಲರ ಹೇಳಿದರು.
ಹಾವಿನಾಳ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಸಂಜಯ ಖಡಗೇಕರ, ವೈದ್ಯಾಧಿಕಾರಿ ಡಾ| ಜಾನ್ ಕಠವಟೆ ಹಾಗೂ ಕೃಷಿ ಅಧಿಕಾರಿ ಲಕ್ಷ್ಮೀ ಕಾಮಗೊಂಡ ಮಾತನಾಡಿ, ತಮ್ಮ ಇಲಾಖೆಗಳ ವಿವಿಧ ಯೋಜನೆಗಳ ಮಾಹಿತಿ ನೀಡಿ ಅದರ ಸದುಪಯೋಗ ಪಡೆಯುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಸಮಸ್ಯೆಗಳ ಕುರಿತು ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ನೀಡಿದ ಹಲವಾರು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹರಿಹಾರ ದೊರಕಿಸಲಾಯಿತು. ಹಲವು ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಲ್ಮೇಶ್ವರ ಮಠದ ವಿಜಯ ಮಹಾಂತೇಶ ಶಿವಾಚಾರ್ಯ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಸ್ಮಶಾನ ಭೂಮಿಗೆ ಹದ್ದು ಬಂದೋಬಸ್ತ್ ಮಾಡಿ ಸ್ಥಳ ಗುರುತಿಸಿಲಾಯಿತು. ನಂತರ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಮನಶ್ವಿನಿ, ಅಂಗವಿಕಲ ಪಿಂಚಣಿ ಪ್ರಮಾಣ ಪತ್ರ ಸೇರಿದಂತೆ ಹಲವಾರು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಕಲ್ಲು ಉಟಗಿ, ಜಿಪಂ ಮಾಜಿ ಸದಸ್ಯ ಭೀಮಾಶಂಕರ ಬಿರಾದಾರ, ಕಂದಾಯ ನಿರೀಕ್ಷಕ ಆರ್.ಐ. ಕೊಡಹೊನ್ನ, ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಕೋಳಿ ಸೇರಿದಂತೆ ವಿಇಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.