Advertisement
ಬೆಂಗಳೂರು ನಗರ ಜಿಪಂ ವ್ಯಾಪ್ತಿಯಲ್ಲಿ ಸುಮಾರು 96 ಗ್ರಾಪಂಗಳಿವೆ. ಈ ಎಲ್ಲಾ ಗ್ರಾಪಂಗಳಲ್ಲಿ ಹಂತ-ಹಂತವಾಗಿ ಮಾರ್ಚ್ ಅಂತ್ಯದ ಒಳಗೆ ಸ್ವಚ್ಛತೆಗೆ ಸಂಬಂಧಿಸಿದ ಕಾರ್ಯಕ್ರಗಳನ್ನು ರೂಪಿಸಲಿದೆ. ನೀರು ನೈರ್ಮಲೀಕರಣ, ಘನ ಮತ್ತು ದ್ರವ್ಯ ತ್ಯಾಜ್ಯಗಳ ನಿರ್ವಹಣೆ, ಮನೆ ಆವರಣ ಸುಂದರವಾಗಿ ಇಟ್ಟುಕೊಳ್ಳುವುದು ಸೇರಿದಂತೆ ಶುಚಿತ್ವಕ್ಕೆ ಸಂಬಂಧಿಸಿದಂತೆ ಹಲವು ತಿಳಿವಳಿಕೆ ನೀಡಲಿದೆ.
Related Articles
Advertisement
ವಿದ್ಯಾರ್ಥಿಗಳಿಗೆ ಈ ಬಗ್ಗೆ ಪೂರಕ ಮಾಹಿತಿ ನೀಡಿದರೆ ಮತ್ತಷ್ಟು ಅನುಕೂಲವಾಗ ಲಿದೆ ಎಂದು ಸ್ವಚ್ಛ ಸರ್ವೇಕ್ಷಣ್ ಮಿಷನ್‌ನ ಅಧಿಕಾರಿಗಳು ಹೇಳಿದರು. ಶುಚಿತ್ವಕ್ಕೆ ಸಂಬಂಧಿಸಿದಂತೆ ಈಗಾಗಲೇ ಜನ ಜಾಗೃತಿ ವಿಡಿಯೋಗಳನ್ನು ಸಿದ್ಧಪಡಿಸಲಾಗಿದೆ. ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಲಿ ಎಂಬ ಕಾರಣದಿಂದ ಶಾಲೆಗಳಲ್ಲಿ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.
ಸ್ತ್ರೀಶಕ್ತಿ ಸಂಘಟನೆಗಳಿಗೂ ಶುಚಿತ್ವದ ಪಾಠ: ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ. ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಸ್ತ್ರೀ ಶಕ್ತಿ ಸಂಘಟನೆಗಳಿಗೂ ಕೂಡ ಮನೆ ಸುತ್ತಮುತ್ತಲಿನ ಆವರಣ ಮತ್ತು ಹೊರಗಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ತಿಳಿ ಹೇಳಲಾಗುವುದು. ಈ ಸಂಬಂಧ ಸ್ತ್ರೀಶಕ್ತಿ ಸಂಘಟನೆಗಳಿಗೂ ಮಾಹಿತಿ ನೀಡಲಾಗುವುದು ಎಂದು ನಗರ ಜಿಪಂ ಉಪ ಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್‌ನ ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಿದ್ದರಾಮಯ್ಯ ಹೇಳಿದ್ದಾರೆ.
ಈ ಹಿಂದೆ 2016ರಲ್ಲಿ ಬೆಂಗಳೂರು ನಗರ ಜಿಪಂ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಎಂದು ಘೋಷಿಸಿಕೊಂಡಿತ್ತು. ಬರೀ ಘೋಷಣೆ ಮಾಡಿ ಕೊಂಡರೆ ಸಾಲದು, ಅದರ ಸುಸ್ಥಿರತೆಗೂ ಆದ್ಯತೆ ನೀಡಬೇಕು. ಆ ಹಿನ್ನೆಲೆಯಲ್ಲಿ ನಗರ ಜಿಪಂ ಸ್ವಚ್ಛ ಭಾರತ್ ಮಿಷನ್ ವಿಭಾಗದ ಅಧಿಕಾರಿಗಳು ಶುಚಿತ್ವಕ್ಕೆ ಸಂಬಂಧಿಸಿದ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.
ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಿದ ಬಳಿಕ ನಿರಂತರವಾಗಿ ನೈರ್ಮಲ್ಯತೆಗೆ ಸಂಬಂಧಿಸಿದಂತೆ ಮಾಹಿತಿ, ಶಿಕ್ಷಣ-ಸಂವಹನ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಇದೀಗ ಮತ್ತೆ ಗ್ರಾಪಂ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸ್ತ್ರೀಶಕ್ತಿ ಸಂಘಟನೆಗಳಿಗೆ ಶುಚಿತ್ವದ ಪಾಠ ಹೇಳಿ ಕೊಡಲಾಗುವುದು.-ಕೆ.ಶಿವರಾಮೇಗೌಡ, ಬೆಂಗಳೂರು ನಗರ ಜಿಪಂ ಸಿಇಒ * ದೇವೇಶ ಸೂರಗುಪ್ಪ