Advertisement

ಮೌಲ್ಯಾಧಾರಿತ, ಡಿಜಿಟಲ್‌ ಕಲಿಕೆಗೆ ಒತ್ತು: ಬಿಎಸ್‌ವೈ

12:44 AM Jan 13, 2021 | Team Udayavani |

ಬೆಂಗಳೂರು: ಉತ್ತಮ ಗುಣಮಟ್ಟ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಜತೆಗೆ ಕಲಿಕೆಯಲ್ಲಿ ಡಿಜಿಟಲ್‌ ತಂತ್ರಜ್ಞಾನಕ್ಕೂ ಉತ್ತೇಜನ ನೀಡುವುದಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದರು.

Advertisement

ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್‌ಗಳನ್ನು ವಿತರಿಸಲು ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದ ಕಾಲೇಜುಗಳ ಅಭಿವೃದ್ಧಿಗೆ 430 ಕೋಟಿ ರೂ. ನೀಡಲಾಗಿದೆ. ವಿದ್ಯಾರ್ಥಿನಿಯರ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಯಲ್ಲಿದೆ. ಡಿಜಿಟಲ್‌ ಕಲಿಕಾ ಯೋಜನೆಯನ್ನು 35 ಕೋಟಿ ರೂ. ವೆಚ್ಚದಲ್ಲಿ 437 ಸರಕಾರಿ ಪದವಿ ಕಾಲೇàಜುಗಳು, 87 ಸರಕಾರಿ ಪಾಲಿಟೆಕ್ನಿಕ್‌, 14 ಸರಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಶಿಕ್ಷಣ ವ್ಯವಸ್ಥೆಗೆ ಹೊಸ ದಿಕ್ಕು ನೀಡಲಿರುವ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಮಾಡಲಾಗುತ್ತಿದೆ. ಆಲೋಚನಾ ಶಕ್ತಿ, ಜ್ಞಾನ, ಕೌಶಲಾಭಿವೃದ್ಧಿ ಬಗ್ಗೆ ಯುವಕರಲ್ಲಿ ಅರಿವು

ಮೂಡಿಸಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ಉದ್ದೇಶವನ್ನು ರಾಜ್ಯ ಶಿಕ್ಷಣ ನೀತಿ ಹೊಂದಿದ್ದು, ಈ ನೀತಿ ಜಾರಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸುಧಾರಣೆ ಆಗಲಿದೆ ಎಂದರು.

10 ದಶಲಕ್ಷ ಉದ್ಯೋಗ ಸೃಷ್ಟಿಗೆ ಪಣ :

Advertisement

ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ  ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದರ ಜತೆಗೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next