ಚನ್ನರಾಯಪಟ್ಟಣ: ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಯುತ, ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.
ಪಟ್ಟಣದ ಪಿರಂಗಿಮಠದ ಸಮೀಪದಲ್ಲಿನ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ಹೆಚ್ಚು ಉದ್ಯೋಗ ಅವಕಾಶವನ್ನು ಸೃಷ್ಟಿಸಬೇಕಾಗಿದೆ ಎಂದರು.
ಕೌಶಲ್ಯಾಧಾರಿತ ಯೋಜನೆಯನ್ನು ಬಜೆಟ್‌ನಲ್ಲಿ ಮಾತ್ರ ಚರ್ಚಿಸುತ್ತಿದ್ದು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರಗಳು ವಿಫಲವಾಗುತ್ತಿವೆ. ಕೋವಿಡ್ ಸೋಂಕಿನಿಂದ ಪ್ರಸಕ್ತ ವರ್ಷ ಶಿಕ್ಷಣ ವ್ಯವಸ್ಥೆಗೆ ಹಿನ್ನಡೆಯಾಗಿದೆ, ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಆರಂಭವಾಗಿದ್ದು ಪೋಷಕರು ತಮ್ಮ ಮನೆಯಲ್ಲಿಯೇ ಶಿಕ್ಷಣನೀಡಲು ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಮಾದರಿ ಶಾಲೆ ತೆರೆದು ಒಂದರಿಂದ 10ನೇ ತರಗತಿಯವರೆಗೆ ಉತ್ತಮ ಶಿಕ್ಷಣ ನೀಡುವ ಯೋಜನೆ ರೂಪಿಸಬೇಕು, ನಬಾರ್ಡ್ ವತಿಯಿಂದ ಈಗಾಗಲೇ 8 ಕಡೆ ಶಾಲಾ ಕಟ್ಟಡವನ್ನು ನಿರ್ಮಿಸಿದ್ದು ಅವುಉದ್ಘಾಟನೆ ಗೊಳ್ಳಲಿವೆ, ಶಿಥಿಲ ಗೊಂಡಿರುವ ಶಾಲಾ ಕಟ್ಟೆಗಳನ್ನು ಜ್ಯೇಷ್ಠತೆಯ ಆಧಾರದ ಮೇಲೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಅಭಿ ನಂದಿಸಲಾಯಿತು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ, ತಹಶೀಲ್ದಾರ್ ಜೆ.ಬಿ. ಮಾರುತಿ, ಡಿವೈಎಸ್‌ಪಿ ಬಿ.ಬಿ.ಲಕ್ಷ್ಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿಎನ್.ಜೆ.ಸೋಮನಾಥ್, ಇಒ ಎಚ್. ಎಸ್.ಚಂದ್ರಶೇಖರ್, ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಗೌಡಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಮಂಜೇಗೌಡ, ತಾಲೂಕು ನೌಕರರ ಸಂಘದ ಅಧ್ಯಕ್ಷ ದೇವೇಗೌಡ, ಮಾಜಿ ಅಧ್ಯಕ್ಷ ಲೋಕೇಶ್, ರಾಷ್ಟ್ರ ಪ್ರಶಸ್ತಿ ಜೇತ ಶಿಕ್ಷಕರಾದ ಇನಾಸಪ್ಪ, ಸಿದ್ದರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮೇಗೌಡ ಇದ್ದರು.