Advertisement

ಅಲ್ಪಸಂಖ್ಯಾತರ ಯೋಜನೆ ಅನುಷ್ಠಾನಕ್ಕೆ ಒತ್ತು ಕೊಡಿ

05:01 PM Jul 28, 2018 | |

ಬೀದರ: ಪ್ರಧಾನ ಮಂತ್ರಿಗಳ ಹೊಸ 15 ಅಂಶ ಕಾರ್ಯಕ್ರಮಗಳು ಹಾಗೂ ಅಲ್ಪಸಂಖ್ಯಾತರಿಗೆ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ಕೊಡುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ ಅಹಮದ್‌ ಸೂಚಿಸಿದರು.

Advertisement

ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು
ಮಾತನಾಡಿದರು. ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆ, ಶ್ರಮ ಶಕ್ತಿ ಸಾಲ, ಅರಿವು ಸಾಲ, ಮೈಕ್ರೋ ಲೋನ್‌, ಗಂಗಾ ಕಲ್ಯಾಣ, ಪಶು ಸಂಗೋಪನೆ ಯೋಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಡಿ ಜಿಲ್ಲೆಯಲ್ಲಿ ಕೆಲವು ಫಲಾನುಭವಿಗಳಿಗೆ ಸಾಲ ಬಿಡುಗಡೆಯಾಗಿದೆ. ಕೆಲವು ಫಲಾನುಭವಿಗಳ ಪಟ್ಟಿಯನ್ನು ನಿಗಮದ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. 2017-18ನೇ ಸಾಲಿನಲ್ಲಿ ಅಲ್ಪಸಂಖ್ಯಾತ ವರ್ಗದ ಪೋಸ್ಟ್‌ ಮೆಟ್ರಿಕ್‌ ಹಾಗೂ ಮೆಟ್ರಿಕ್‌ ಕಮ್‌ ಸ್ಕಾಲರ್‌ಶಿಪ್‌ ಯೋಜನೆಯಡಿ ಒಟ್ಟು 9,920 ಅರ್ಜಿಗಳನ್ನು ಸ್ವೀಕರಿಸಿದ್ದು, ಈ ಪೈಕಿ ಅರ್ಹ ಅರ್ಜಿಗಳ ಸಂಖ್ಯೆ 8,036 ಇದೆ ಎಂದು ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿ ಅವಿನಾಶ ಕೆ. ಸಭೆಗೆ ಮಾಹಿತಿ ನೀಡಿದ್ದಾರೆ. 

ಸರ್ಕಾರವು ಅಲ್ಪಸಂಖ್ಯಾತ ಸಮುದಾಯ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶಿಷ್ಯವೇತನ ರೂಪದಲ್ಲಿ ಸಾಕಷ್ಟು ಅನುದಾನ ನೀಡುತ್ತಿದೆ. ಇದು ಎಲ್ಲಾ ಮಕ್ಕಳಿಗೂ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಯೋಗದ ಅಧ್ಯಕ್ಷರು ಸೂಚಿಸಿದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ 7ನೇ ಮತ್ತು 10ನೇ ತರಗತಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2017-18ನೇ ಸಾಲಿನಲ್ಲಿ ವಿವಿಧ ತಾಲೂಕುಗಳು ಸೇರಿ ಒಟ್ಟು 53 ಶಾಲೆಯಲ್ಲಿ ಪರಿಹಾರ ಬೋಧನೆ ನೀಡಲಾಗಿದೆ. ಜಿಲ್ಲೆಯಲ್ಲಿ 493 ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಇಲ್ಲಿ ಭಾಷಾ ಶಿಕ್ಷಕರ ಕೊರತೆಯಿಲ್ಲ. ಆದರೆ, ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ಅಲ್ಪಸಂಖ್ಯಾತ ಸಮುದಾಯದವರಿಗೆ ಮಾಹಿತಿ ಅಧಿಕಾರಿಗಳ ಕಚೇರಿ ಇರುವ ಕುರಿತು ಸಾರ್ವಜನಿಕರಿಗೆ
ತಿಳಿಸುವ ಕೆಲಸ ಆಗಬೇಕು. ಮಾಹಿತಿ ಅಧಿಕಾರಿಯ ಹೆಸರು, ಅವರ ವಿಳಾಸ, ಯಾವ ಮಾಹಿತಿ ಪಡೆಯಬಹುದು ಎಂಬುದಕ್ಕೆ ಸಂಬಂಧಿಸಿದಂತೆ ವಿವರವನ್ನೊಳಗೊಂಡ ಕರಪತ್ರ ಮುದ್ರಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಂಚಿಕೆ ಮಾಡಿ ಜನರಿಗೆ ಮಾಹಿತಿ ಮುಟ್ಟುವಂತೆ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು. ಮೊಹಮ್ಮದ ಗವಾನ್‌ ಸಂಶೋಧನಾ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಚರ್ಚಿಸಲಾಗಿದೆ. ಈ ಸಂಬಂಧ ಎರಡು ಸಮಿತಿಗಳನ್ನು ರಚಿಸಲಾಗಿದೆ.

Advertisement

ಕ್ರಿಯಾ ಯೋಜನೆಯೊಂದನ್ನು ರೂಪಿಸಲು ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಸಭೆಗೆ
ತಿಳಿಸಿದರು. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಅನಿಸ್‌ ಸಿರಾಜ್‌, ಸದಸ್ಯರಾದ ಡಾ| ಆರ್‌.ಅಬ್ದುಲ್‌ ಹಮೀದ್‌, ರಫೀ ಬಂಡಾರಿ, ಮಹಮೂದ್‌ ಪಟೇಲ್‌, ಕೆ.ಮಹೇಂದ್ರ ಜೈನ್‌, ಬಲಬೀರ್‌ ಸಿಂಗ್‌, ಡಾ| ಮೆಟಲ್ಡಾ ಡಿಸೋಜಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next