Advertisement

ಆಧುನಿಕ ಗ್ರಾಮಾಭಿವೃದ್ಧಿಗೆ ಒತ್ತು

11:33 AM Jan 20, 2018 | |

ಕೆಂಗೇರಿ: ಒಂದು ಕೋಟಿ ರೂ. ವೆಚ್ಚದ ಸುವರ್ಣ ಗ್ರಾಮ ಯೋಜನೆ ಅಡಿಯಲ್ಲಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿ ಕುಡಿಯುವ ನೀರು, ರಸ್ತೆ, ಹಾಗೂ ಬೀದಿ ದೀಪಗಳನ್ನು ಸಮರ್ಪಕವಾಗಿ ಅಳವಡಿಸಲಾಗುತ್ತದೆ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

Advertisement

ಎಚ್‌.ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡಬೆಲೆ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಎಚ್‌. ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಸಂಕಲ್ಪ ಮಾಡಲಾಗಿದೆ ನಾಗರಿಕರ ಮನವಿ ಮೇರೆಗೆ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ನಾಗರಿಕರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಲಾಗಿದೆ   ಎಂದು ತಿಳಿಸಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರ ಆರಾಧನಾ ಸಮಿತಿಯ ಅಧ್ಯಕ್ಷ ಎಂ.ನಾರಾಯಣಪ್ಪ ಮಾತನಾಡಿ ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾಮಗಾರಿಗಳಿಂದ ವಂಚಿತವಾದ ಗ್ರಾಮಗಳಿಗೆ ಶಾಸಕರ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು. ದೊಡ್ಡಬೆಲೆ ಕಾಲೋನಿಯ ಎಲ್ಲಾ ರಸ್ತೆಗಳಿಗೆ ಕಾಂಕ್ರೀಟ್‌ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದ್ದು, ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ದೊಡ್ಡಬೆಲೆ ಜಿಪಂ ಸದಸ್ಯೆ ಕುಸುಮ ಶಿವಮಾದಯ್ಯ, ಎಚ್‌.ಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷೆ ನರಸಮ್ಮ ನಾರಾಯಣಪ್ಪ, ಉಪಾಧ್ಯಕ್ಷೆ ಸವಿತಾ, ಗ್ರಾಪಂ ಸದಸ್ಯರಾದ ರಾಜಣ್ಣ, ಕುಮಾರ್‌, ವಿಜಯ ನಾಗರಾಜ್‌, ಯುವ ಮುಖಂಡ ಶಿವಕುಮಾರ್‌ ಗೌಡ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next