Advertisement

ಕುಡಿವ ನೀರು, ನೈರ್ಮಲ್ಯಕ್ಕೆ ಒತ್ತು ಕೊಡಿ

06:53 AM Jul 09, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಗ್ರಾಪಂಗಳಿಗೆ ನೇಮಕಗೊಂಡಿರುವ ಆಡಳಿತಾಧಿಕಾರಿಗಳು ಕೋವಿಡ್‌- 19 ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಿ, ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಬೇಕೆಂದು ಎಂದು ಜಿಪಂ ಸಿಇಒ  ಬಿ.ಫೌಜಿಯಾ ತರುನ್ನುಮ್‌ ಸೂಚಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಗ್ರಾಪಂ ಗಳಿಗೆ ನೇಮಕಗೊಂಡಿರುವ ಆಡಳಿತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿ, ಸಂವಿಧಾನದ 73ನೇ ತಿದ್ದುಪಡಿಯನ್ವಯ  ಗ್ರಾಪಂಗಳಿಗೆ ಪ್ರಸಕ್ತ ಸಾಲಿನಲ್ಲಿ ಚುನಾವಣೆ ನಡೆಸಬೇಕಿತ್ತು. ಆದರೆ, ಕೋವಿಡ್‌ 19 ಸೋಂಕು ಬಾಧಿಸುತ್ತಿ ರುವ ಕಾರಣ, ಮಾಡುತ್ತಿಲ್ಲ.

ಹೀಗಾಗಿ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಿಸಿದೆ ಎಂದು ವಿವರಿಸಿದರು. ತರಬೇತಿ ಕಾರ್ಯಾಗಾರ:  ಈ ವೇಳೆ ಗ್ರಾಪಂ ಆಡಳಿತಾಧಿಕಾರಿಗಳಿಗೆ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ, ಮೈಸೂರು ಹಾಗೂ ಜಿಲ್ಲಾ ಪಂಚಾಯಿತಿ, ಸಭಾಂಗಣ  ದಲ್ಲಿ ಆಯೋಜಿಸಿರುವ ಎರಡು ದಿನಗಳ  ತರಬೇತಿ ಕಾರ್ಯಾಗಾರಕ್ಕೆ ಡೀಸಿ ಚಾಲನೆ ನೀಡಿದರು.

ಜಿಪಂ ಉಪ ಕಾರ್ಯದರ್ಶಿ ಡಾ.ಎನ್‌. ನೋಮೇಶ್‌, ಯೋಜನಾ ನಿರ್ದೇಶಕ ಗಿರಿಜಾ ಶಂಕರ್‌, ಅಬ್ದುಲ್‌ ನಜೀರ್‌ ಸಾಬ್‌ ಸಂಸ್ಥೆಯ ತ್ರಿಭುವನೇಶ್ವರಿ, ನರಸಿಂಹರೆಡ್ಡಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next