Advertisement

ಗುಣಮಟ್ಟದ ಶಿಕ್ಷಣಕ್ಕೆ ಪ್ರಾಧಾನ್ಯ ನೀಡಿ: ಐವನ್‌ ಡಿ’ಸೋಜಾ

12:30 AM Jan 26, 2019 | Team Udayavani |

ಶಿರ್ವ: ಮಕ್ಕಳು ಸರಕಾರಿ ಶಾಲೆಯಲ್ಲಿ ಕಲಿತರೆ ಪ್ರಯೋಜನವಿಲ್ಲ. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಭವಿಷ್ಯವಿದೆ ಎನ್ನುವ ಹೆತ್ತವರ ಚಿಂತನಾ ಕ್ರಮದಿಂದಾಗಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಕ್ರಾಂತಿಕಾರಿ ಬದಲಾವಣೆಯಾಗಬೇಕಿದೆ. 

Advertisement

ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಮತ್ತು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಬೇಕಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ/ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಹೇಳಿದರು.

ಅವರು ಶುಕ್ರವಾರ ಮುದರಂಗಡಿ ಸರಕಾರಿ ಪ.ಪೂ.ಕಾಲೇಜಿಗೆ ಭೇಟಿ ನೀಡಿ, ಮಾತನಾಡಿ ತಾನು ಈ ಶಾಲೆಯ ಹಳೆ
ವಿದ್ಯಾರ್ಥಿಯಾಗಿದ್ದು ಬೆಳ್ಳಿ ಹಬ್ಬದ ಸಂಭ್ರಮ ಆಚರಣೆ ಸಿದ್ಧತೆಯಲ್ಲಿರುವ ಶಾಲೆಯಲ್ಲಿ ಗತವೈಭವ ಮರುಕಳಿಸಬೇಕು. ವಿದ್ಯಾರ್ಥಿಗಳಲ್ಲಿ ಕಲಿಯುವ ಉತ್ತಮ ವಾತಾವರಣ ನಿರ್ಮಾಣವಾಗಬೇಕಿದೆ.

ರಾಜ್ಯ ಸರಕಾರ ಸರಕಾರಿ ಶಾಲೆಗಳಿಗೆ ಅನುದಾನ ನೀಡುತ್ತಿದ್ದು ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಡೀಕರಿಸಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ತಿಳಿಸಿದರು.ಸರಕಾರಿ ಪ.ಪೂ. ಕಾಲೇಜಿನ ಹಿರಿಯ ಉಪನ್ಯಾಸಕ ನಿರಂಜನ್‌ ಪ್ರಾಸ್ತಾವಿಕವಾಗಿ ಮಾತನಾಡಿ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಶಾಲೆಯ ಆವರಣ ಗೋಡೆ ನಿರ್ಮಾಣ, ಆಟದ ಮೈದಾನ ವಿಸ್ತರಣೆ, ಸಭಾ ಭವನ, ವಿಶ್ರಾಂತಿ ಗೃಹ ಮೊದಲಾದ ಮೂಲಭೂತ ಸೌಕರ್ಯದೊಂದಿಗೆ ಅಭಿವೃದ್ಧಿಪಡಿಸಿ ಶಾಲೆಯನ್ನು ಮಾದರಿ ಸರಕಾರಿ ಶಾಲೆಯನ್ನಾಗಿ ರೂಪಿಸಬೇಕಾಗಿದೆ ಎಂದು ಹೇಳಿದರು.

ಮುದರಂಗಡಿ ತಾ.ಪಂ. ಸದಸ್ಯ ಮೈಕಲ್‌ ರಮೇಶ್‌ ಡಿ’ಸೋಜಾ, ಗ್ರಾ.ಪಂ. ಅಧ್ಯಕ್ಷ ಡೇವಿಡ್‌ ಡಿ’ಸೋಜಾ,ಮಾಜಿ ತಾ.ಪಂ.ಅಧ್ಯಕ್ಷೆ ಅನಿತಾ ಡಿ’ಸೋಜಾ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಪ್ರಭು, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕರುಣಾಕರ ಭಂಡಾರಿ, ಪ್ರೌಢಶಾಲಾ ಮುಖ್ಯಶಿಕ್ಷಕಿ ವೇದಾವತಿ, ಮಹಿಳಾ ಘಟಕದ ಅಧ್ಯಕ್ಷೆ ಜೆನೆಟ್‌ ಬಬೋìಜಾ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಮುದರಂಗಡಿ ಗ್ರಾ.ಪಂ. ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಎಸ್‌ಡಿಎಂಸಿ 
ಸದಸ್ಯರು, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next