Advertisement

ಪರಿಶಿಷ್ಟ ಗ್ರಾಮಗಳ ಅಭಿವೃದ್ಧಿಗೆ ಒತ್ತು

11:46 AM Aug 13, 2018 | Team Udayavani |

ಎಚ್‌.ಡಿ.ಕೋಟೆ: ಕೇಂದ್ರ ಸರ್ಕಾರದ ಆದೇಶದನ್ವಯ ಶೇ.50ಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಜನಾಂಗದವರು ವಾಸಿಸುವ ಗ್ರಾಮಗಳಲ್ಲಿ ಭೌತಿಕ ಮತ್ತು ಸಾಮಾಜಿಕವಾಗಿ ಮೂಲಸೌಲಭ್ಯ ಒದಗಿಸಿ ಗ್ರಾಮವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಬೇಕಾಗಿದೆ. ಇದಕ್ಕೆ ಗ್ರಾಮದ ಜನತೆ ಸಹಕಾರ ಅಗತ್ಯ ಎಂದು ಸಂಸದ ಆರ್‌.ಧ್ರುವನಾರಾಯಣ ತಿಳಿಸಿದರು.

Advertisement

ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿರುವ ತಾಲೂಕಿನ ಕೋಹಳ ಗ್ರಾಮದ ಅಭಿವೃದ್ಧಿಗೆ ಸುಮಾರು 45 ಲಕ್ಷ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಎಚ್‌.ಡಿ.ಕೋಟೆ ತಾಲೂಕಿನಲ್ಲಿ 8 ಗ್ರಾಮಗಳು ಆಯ್ಕೆಯಾಗಿದ್ದು, ಆ ಪೈಕಿ ಕೋಹಳ ಗ್ರಾಮವೂ ಒಂದಾಗಿದೆ. ಪ್ರತಿ ಗ್ರಾಮಕ್ಕೆ ಕೇಂದ್ರ ಸರ್ಕಾರದಿಂದ 25 ಲಕ್ಷ, ರಾಜ್ಯ ಸರ್ಕಾರದಿಂದ 20ಲಕ್ಷ ರೂ. ಬಿಡುಗಡೆಯಾಗಿದೆ. ಗ್ರಾಮದಲ್ಲಿ ರಸ್ತೆ, ಚರಂಡಿ ನಿರ್ಮಾಣ, ಕುಡಿಯುವ ನೀರಿನ ಘಟಕ ಸ್ಥಾಪನೆ, ಜತೆಗೆ ಗ್ರಾಮಸ್ಥರಿಗೆ ನೀರಿನ ಸಂಪರ್ಕ,

ವಿದ್ಯುತ್‌ ಸಂಪರ್ಕ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಗ್ರಾಮವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು ಎಂದು ಹೇಳಿದರು. ಗ್ರಾಮದ ರೈತರ ಹಲವು ದಿನಗಳ ಬೇಡಿಕೆಯಾದ ಸಾಗುವಳಿ ಪತ್ರ ವಿತರಣೆ ಸಂಬಂಧ ತಹಶೀಲ್ದಾರ್‌, ಶಾಸಕರ ನೇತƒತ್ವದಲ್ಲಿ ಮುಂದಿನ ದಿನಗಳಲ್ಲಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು. 

ಶಾಸಕ ಸಿ.ಅನಿಲ್‌ಕುಮಾರ್‌ ಮಾತನಾಡಿ, ಚುನಾವಣೆ ವೇಳೆ ಗ್ರಾಮದ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದರು. ಇದನ್ನು ಮನಗಂಡು ಗ್ರಾಮದ ಅಭಿವೃದ್ಧಿಗೆ ಸದ್ಯದಲ್ಲಿ ನೀಡಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಅಭಿವೃದ್ಧಿಗೆ ಶ್ರಮಿಸಿ, ಇನ್ನು ಹೆಚ್ಚಿನ ಅನುದಾನ ಬಿಡುಗಡೆಗೊಳಿಸುತ್ತೇನೆ ಎಂದರು.

Advertisement

ಮೈಮುಲ್‌ ನಿರ್ದೇಶಕ ಈರೇಗೌಡ, ಜಿ.ಪಂ. ಮಾಜಿ ಸದಸ್ಯ ಚಿಕ್ಕವೀರನಾಯಕ, ಭೋವಿ ಜನಾಂಗದ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಬಿ.ವಿ.ಸೀತಾರಾಂ, ತಾ.ಪಂ. ಸದಸ್ಯ ಶಿವಣ್ಣ, ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ, ಕಾಂಗ್ರೆಸ್‌ ಮುಖಂಡರಾದ ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣ, ಸದಸ್ಯರಾದ ಶಿವರಾಜು, ಜಯಪ್ರಕಾಶ್‌, ವಿನೋದ್‌, ಶಿವರಾಜು, ಶಂಭುಲಿಂಗು, ಪುಟ್ಟೇಗೌಡ, ತಾಪಂ ಇಒ ಶ್ರೀಕಂಠೇರಾಜ್‌ಅರಸ್‌, ಎಇಇ ಮಹೇಶ್‌ ಸೇರಿದಂತೆ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next