Advertisement

ಬಡಾವಣೆಗಳ ಆಧುನಿಕ ಅಭಿವೃದ್ಧಿಗೆ ಒತ್ತು

12:31 PM Jan 09, 2018 | |

ಕೆಂಗೇರಿ: ಹಲವಾರು ವರ್ಷಗಳಿಂದ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದ ಬಡಾವಣೆಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ಹೇಳಿದರು.

Advertisement

ಹೇರೋಹಳ್ಳಿ ವಾರ್ಡ್‌ನ  ಬಿಇಎಲ್‌ ಬಡಾವಣೆಯಲ್ಲಿ 2.5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ವಾರ್ಡ್‌ನಲ್ಲಿ ಕಾಂಕ್ರೀಟ್‌ ರಸ್ತೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ಶೀಘ್ರವೇ ಕುಡಿಯಲು ಕಾವೇರಿ ನೀರು ಸರಬರಾಜು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಪಾಲಿಕೆ ಸದಸ್ಯ ರಾಜಣ್ಣ ಮಾತನಾಡಿ, ನಾಗರಿಕರ ಅವಶ್ಯಕತೆಗೆ ಅನುಗುಣವಾಗಿ ಹಾಗೂ ಆರೋಗ್ಯ ಸುಧಾರಣೆಗಾಗಿ ವಾರ್ಡ್‌ ವ್ಯಾಪ್ತಿಯಲ್ಲಿ 15ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದ್ದು, ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 10 ಘಟಕಗಳಿಂ ಜನತೆ ಶುದ್ಧ ನೀರು ಪಡೆಯುತ್ತಿದ್ದಾರೆ ಎಂದರು. 

ಇದೇ ವೇಳೆ ವಾರ್ಡ್‌ ವ್ಯಾಪ್ತಿಯ ಗಾಂಧಿ ಉದ್ಯಾನವನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ  ಭೂಮಿ ಪೂಜೆ ನೆರವೇರಿಸಲಾಯಿತು. ಮುಖಂಡರಾದ ಬಿಜ್ಜಳ್ಳಿ ರಾಜಣ್ಣ, ಅಂಜನ್‌ಕುಮಾರ್‌, ನರಸೇಗೌಡ  ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next