Advertisement
ಸೋಮವಾರ ಇಲ್ಲಿನ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ನಿರಂತರ ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಕೆಲಸವಿಲ್ಲದಂತಾಗಿದೆ. ಹಾಗಾಗಿ ಹಸಿದ ಹೊಟ್ಟೆಗಳಿಗೆ ಕೂಲಿ ಕಾಳು ಒದಗಿಸುವ ಉದ್ಯೋಗಖಾತ್ರಿಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಇಂತಹ ಸಮಯದಲ್ಲಿ ಸಾರ್ವಜನಿಕರ ಆಕ್ರೋಶ ಮತ್ತು ಅಸಮಾಧಾನವನ್ನು ಸಮಾಧಾನದಿಂದ ತಣಿಸಬೇಕು ಎಂದರು.
Related Articles
ಬರ ಅಧ್ಯಯನ ತಂಡ ಆಗಮಿಸಿ ಮತ್ತೂಮ್ಮೆ ಸಮೀಕ್ಷೆ ನಡೆಸಲಿದೆ ಎಂದರು.
Advertisement
ಗ್ರಾಮೀಣ ಭಾಗಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ದುರಸ್ತಿಯಾಗದೇ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಯನ್ನು ಕೂಡಲೇ ಮಾಡುವಂತೆ ಶಾಸಕರು ಸೂಚನೆ ನೀಡಿದರು. ಘಟಕಗಳ ದುರಸ್ಥಿಗೆ ಸಂಬಂಧಪಟ್ಟಂತೆ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಧಿಕಾರಿಗಳು ತಕ್ಷಣ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿ 15 ದಿನಗಳಿಗೊಮ್ಮೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಕುಡಿಯುವ ನೀರು ಸರಬರಾಜು ವಿಭಾಗದ ಅಧಿಕಾರಿಗಳ ಸಭೆಯನ್ನು ನಡೆಸುವಂತೆ ಸೂಚಿಸಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಅಧ್ಯಕ್ಷೆ ಕವಿತಾ ರಾಮಣ್ಣ ಮಾತನಾಡಿ, ಪ್ರತಿ ಸಭೆಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ತಾಪಂ ಸದಸ್ಯರು ಸೂಚನೆ ನೀಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂಬ ಆರೋಪ ಕೇಳಿ ಬರುತ್ತಿದೆ. ಪ್ರತಿಯೊಬ್ಬ ಅಧಿಕಾರಿ ಯಾವುದೇ ಕಾಮಗಾರಿಯನ್ನು ಕೈಗೊಳ್ಳುವಾಗ ಮತ್ತು ವಿವಿಧ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಾಗ ಸಂಬಂಧಪಟ್ಟ ತಾಪಂ ಸದಸ್ಯರಿಗೆ ಮಾಹಿತಿ ನೀಡಬೇಕೆಂದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಿ.ಎಲ್. ಈಶ್ವರಪ್ರಸಾದ್, ಎಲ್ಲಾ ಅಧಿಕಾರಿಗಳು ಸಭೆಯ ನಿರ್ಣಯಗಳಿಗೆ ಬದ್ಧರಾಗಿರಬೇಕು ಎಂದು ತಿಳಿಸಿದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ತಿಪ್ಪಮ್ಮ ಲಿಂಗಾರೆಡ್ಡಿ, ಸದಸ್ಯರಾದ ಸಣ್ಣಸೂರಯ್ಯ, ಗದ್ದಿಗೆ ತಿಪ್ಪೇಸ್ವಾಮಿ, ಎಚ್. ಸಮರ್ಥರಾಯ, ತಿಮ್ಮಾರೆಡ್ಡಿ, ಕಾಲುವೇಹಳ್ಳಿ ಶ್ರೀನಿವಾಸ್, ಎಸ್.ಒ. ತಿಪ್ಪೇಸ್ವಾಮಿ, ಎಚ್. ಆಂಜನೇಯ, ಜಿ. ತಿಪ್ಪೇಸ್ವಾಮಿ, ಗಂಗೀಬಾಯಿ, ಹನುಮಕ್ಕ, ರಂಜಿತಾ, ತಿಪ್ಪಕ್ಕ, ಉಮಾ, ಸುನಂದಮ್ಮ, ರತ್ನಮ್ಮ, ಜಿ. ವೀರೇಶ್, ಮಲ್ಲಮ್ಮ, ಸಾಕಮ್ಮ, ಕರಡಪ್ಪ ಮತ್ತಿತರರು ಭಾಗವಹಿಸಿದ್ದರು.