Advertisement

ವಿವಿಧ ಬೇಡಿಕೆ ಈಡೇರಿಕೆಗೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

04:33 PM May 05, 2022 | Team Udayavani |

ಲಿಂಗಸುಗೂರು: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

Advertisement

60 ವರ್ಷದ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಿ ಬಿಡುಗಡೆ ಮಾಡಬೇಕು. ಮಾ. 31, 2022ಕ್ಕೆ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ 2022 ಏ.10ಕ್ಕೆ ಮರು ಆದೇಶ ನಿಡಬೇಕು. ಬಜೆಟ್‌ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ 1000 ರೂ. ವೇತನವನ್ನು ಜನವರಿ 2022ರಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ಯೋಜನೆ ಕಾಯಂ ಮಾಡಬೇಕು. ಕಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಹಕಾರ್ಯದರ್ಶಿ ಮಹ್ಮದ್‌ ಹನೀಫ್‌, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಅಕ್ಷರ ದಾಸೋಹ ನೌಕರರ ಸಂಘಟನೆಯ ನಾಗರತ್ನ ಸಂತೆಕೆಲ್ಲೂರು, ವೆಂಕಟೇಶ ಮೇದಿನಾಪೂರ, ಕಮಲಾಬಾಯಿ ಮುದಗಲ್‌, ರೇಣುಕಾ ಸಂತೆಕೆಲ್ಲೂರು, ಬಾಬಾ ಜಾನಿ, ಆಂಜನೇಯ ನಾಗಲಾಪೂರು, ವೆಂಕಟೇಶ ಸೇರಿದಂತೆ ಅನೇಕರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next