Advertisement

ನೂತನ ಪಿಂಚಣಿ ಯೋಜನೆ ರದ್ದತಿಗೆ ನೌಕರರ ಒಕ್ಕೂಟ ಆಗ್ರಹ

02:26 PM May 29, 2022 | Team Udayavani |

ರಾಯಚೂರು: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ನಿಶ್ಚಿತ ಪಿಂಚಣಿ ಮರುಸ್ಥಾಪಿಸಬೇಕು ಎಂದು ಅಖೀಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗ್ರಹಿಸಿದರು.

Advertisement

ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು. ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲು ಅನುವಾಗುವಂತೆ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಆಡಳಿತ ಸುಧಾರಣಾ ಆಯೋಗ-2ರ ನೌಕರ ವಿರೋಧಿ ಶಿಫಾರಸ್ಸುಗಳನ್ನು ತಿರಸ್ಕರಿಸಬೇಕು ಹಾಗೂ ಗುತ್ತಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಮಾನ ವೇತನ ನೀಡಿ, ನೇರ ನೇಮಕಾತಿಯಲ್ಲಿ ಅವರಿಗೆ ನಿಯಮಾನುಸಾರ ಆದ್ಯತೆ ಕಲಿಸಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಕೈಬಿಡಬೇಕು. ಬೆಲೆ ಏರಿಕೆ ನಿಯಂತ್ರಿಸಬೇಕು ಹಾಗೂ ಕೋಮು ಸಾಮರಸ್ಯ ಕಾಪಾಡಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ತಾಯಪ್ಪ ಮರ್ಚೆಟಾಳ್‌, ಪದಾಧಿಕಾರಿಗಳಾದ ಅಮರೇಶಪ್ಪ, ನಾರಾಯಣ, ಮೋಹಿನುದ್ದೀನ್‌ ಹಾಗೂ ಮಹಿಳಾ ನೌಕರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next