Advertisement
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 5 ತಿಂಗಳ ಹಿಂದಷ್ಟೇ ದೇಶದ ಮೊಟ್ಟಮೊದಲ ಐಫೋನ್ ತಯಾರಿಸುವ ವಿಸ್ಟ್ರಾನ್ ಕಂಪನಿ ಆರಂಭವಾಗಿತ್ತು. ಕಂಪನಿಯಲ್ಲಿ ಸುಮಾರು 10 ಮಂದಿಗೆ ಕೆಲಸ ನೀಡುವ ವಾಗ್ದಾನ ಮಾಡಲಾಗಿತ್ತು.
Related Articles
Advertisement
ಹೊರರಾಜ್ಯಗಳ ಕಾರ್ಮಿಕರಿಗೆ ಹೆಚ್ಚಿನ ವೇತನ ನೀಡುತ್ತಿದ್ದ ಕಂಪನಿಯು ಸ್ಥಳೀಯ ಕಾರ್ಮಿಕರಿಗೆ ಕಡೆದ 4 ತಿಂಗಳಿನಲ್ಲಿ ಸಂಬಳ ನೀಡಿಲ್ಲ ಎಂಬುದು ಕಾರ್ಮಿಕರ ಕೋಪಕ್ಕೆ ಪ್ರಮುಖ ಕಾರಣವಾಗಿದೆ.
ಶುಕ್ರವಾರ ಬೆಳಗ್ಗೆ ಕೆಲಸಕ್ಕೆ ಆಗಮಿಸಿದ ಸಾವಿರಾರು ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಕಾರ್ಮಿಕರ ಅಹವಾಲನ್ನು ಆಲಿಸಲು ಅಲ್ಲಿ ಕಂಪನಿಯ ಮುಖ್ಯಸ್ಥರು ಮುಂದಾಗಲಿಲ್ಲ. ಇದರಿಂದ ಕುಪಿತಗೊಂಡ ಕಾರ್ಮಿಕರು ಕಾರ್ಖಾನೆಯ ಪೀಠೋಪಕರಣಗಳನ್ನು ಧ್ವಂಸಗೊಳಿಸಲು ಶುರುಮಾಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಕಾರ್ಮಿಕರ ಕಂಪನಿಯು ಸಂಪೂರ್ಣ ಧ್ವಂಸಗೊಂಡಿದೆ. ಕಂಪನಿಯ ಮುಂಭಾಗದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರುಗಳು ಕಾರ್ಮಿಕರನ್ನು ಕರೆದುಕೊಂಡು ಬರಲು ನಿಂತಿದ್ದ ಅನೇಕ ಬಸ್ಸುಗಳು ಕಾರ್ಮಿಕರ ಆಕ್ರೋಶಕ್ಕೆ ಬಲಿಯಾಗಿವೆ. ಕೈಗೆ ಸಿಕ್ಕ ವಸ್ತುಗಳಿಗೆ ಬೆಂಕಿಯನ್ನು ಹಚ್ಚಲಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಬರುವುದರೊಳಗಾಗಿ ಕಾರ್ಖಾನೆ ಬಹುತೇಕ ಹಾಳಾಗಿತ್ತು. ಪೊಲೀಸರು ಘಟನೆಗೆ ಕಾರಣಕರ್ತರಾಗಿರುವ ನೂರಕ್ಕೂ ಹೆಚ್ಚು ಮಂದಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಎಸ್ಪಿ ಕಾರ್ತಿಕ್ ರೆಡ್ಡಿ ಆಗಮಿಸಿ ಘಟನೆಗೆ ಕಾರಣವೇನೆಂಬುದನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಯಾರೇ ಕಾರಣ ವಾಗಿರಲಿ ಅವರನ್ನು ಪತ್ತೆಹಚ್ಚಿ ಶಿಕ್ಷಿಸುವುದು ಭರವಸೆ ನೀಡಿದ್ದಾರೆ. ಸದ್ಯಕ್ಕೆ ಕಾರ್ಖಾನೆಯ ಕಾರ್ಯಚಟುವಟಿಕೆ ಸ್ಥಗಿತಗೊಂಡಿದೆ.