Advertisement

Employment: ಕನ್ನಡಿಗರಿಗೆ ಉದ್ಯೋಗ; ಜುಲೈ 1ರ ಕರವೇ ಪ್ರತಿಭಟನೆಗೆ ಕಸಾಪ ಬೆಂಬಲ

09:17 PM Jun 27, 2024 | Team Udayavani |

ಬೆಂಗಳೂರು: “ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಜುಲೈ 1ರಂದು ರಾಜ್ಯಾದ್ಯಂತ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯು ಹಮ್ಮಿಕೊಂಡಿರುವ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ ನೀಡಲಿದೆ ಎಂದು  ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕನ್ನಡ-ಕರ್ನಾಟಕ-ಕನ್ನಡಿಗ’ಕ್ಕೆ  ಸಂಬಂಧಿಸಿದ ಯಾವುದೇ ವಿಷಯವಾದರೂ ಕನ್ನಡ ಸಾಹಿತ್ಯ ಪರಿಷತ್ತು ಸ್ಪಂದಿಸುತ್ತದೆ. ಈ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡದಲ್ಲಿಯೇ  ನಾಮಫಲಕದ ವಿಷಯದಲ್ಲಿ ಹೋರಾಟ ನಡೆಸಿದಾಗಲೂ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲಿಸಿತ್ತು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಎಲ್ಲ ಬಗೆಯ ಉದ್ಯೋಗದಲ್ಲಿಯೂ ಕನ್ನಡಿಗರಿಗೆ ಸಿಂಹಪಾಲು ಇರಬೇಕು ಎನ್ನುವುದು ನ್ಯಾಯಯುತ ಬೇಡಿಕೆ. ಡಾ.ಸರೋಜಿನಿ ಮಹಿಷಿ ವರದಿ ಕೂಡ ಇದನ್ನೇ ಹೇಳಿತ್ತು. ಇತ್ತೀಚೆಗೆ ಜಾರಿಯಾದ  ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022ರಲ್ಲಿಯೂ ಕನ್ನಡಿಗರಿಗೆ ಉದ್ಯೋಗವೆಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಲಾಗಿದೆ. ಅಪ್ರಂಟಿಸ್‌ ನಿಯಮ 1961ರ ವಿಧಿ 20ರ ಪ್ರಕಾರ ಕೂಡ  ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು ಎಂದು ಹೇಳಲಾಗಿದೆ.  ಜಾಗತೀಕರಣದ ಹಿನ್ನೆಲೆಯಲ್ಲಿ ಉದ್ಯೋಗಾವಕಾಶಗಳ ಸ್ವರೂಪ ಬದಲಾಗುತ್ತಿದೆ. ಹೊಸ ಮಾದರಿಯ ಶ್ರೇಣಿಕೃತ ವ್ಯವಸ್ಥೆ ರೂಪುಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕುವಂತೆ ಮಾಡುವುದು ಅತ್ಯಗತ್ಯ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next