Advertisement

ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ

10:13 PM Jan 20, 2022 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

Advertisement

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್‌ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಉದ್ಯೋಗ ನೀತಿಯಿಂದ ರಾಜ್ಯದ ಯುವಕರ ಬದುಕು ಹಸನಾಗಲಿದೆ. ಕೆಳಸ್ತರದ ದುಡಿಯುವ ವರ್ಗಕ್ಕೆ ಸಹಾಯಧನ ಬಹಳ ದೊಡ್ಡ ಆಸರೆಯಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಈ ಕಾರ್ಯಕ್ರಮದಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು, ವಿವಿಧ ಉದ್ಯೋಗಳಲ್ಲಿ ತೊಡಗಿ ಕೊಂಡು ರಾಜ್ಯದ ಆರ್ಥಿಕ ತೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದವರು ತಿಳಿಸಿದರು.

ದೇಶದ ಆರ್ಥಿಕತೆಯನ್ನು ಮುನ್ನಡೆ :

ಸುವವರು ದುಡಿಯುವ ವರ್ಗ. ದೇವರು ರೈತರ ಶ್ರಮ ಹಾಗೂ ಕಾರ್ಮಿಕರ ಬೆವರಿನಲ್ಲಿದ್ದಾನೆ ಎಂದು ಕವಿ ರವೀಂದ್ರನಾಥ ಟ್ಯಾಗೋರ್‌ ಅವರು ತಿಳಿಸಿದಂತೆ ದುಡಿಯುವ ವರ್ಗವನ್ನು ದೈವತ್ವಕ್ಕೆ ಹೋಲಿಸುವ ಸಂಸ್ಕೃತಿ ಭಾರತ ದೇಶದಲ್ಲಿದೆ ಎಂದು ತಿಳಿಸಿದರು.

Advertisement

ಆರ್ಥಿಕ ಶಕ್ತಿ ವೃದ್ಧಿ :

ಸಮಾಜದಲ್ಲಿ ಕಾಯಕದ ನಿಷ್ಟೆ, ಜಾಗೃತಿ ಮೂಡಿಸುವುದು ಆವಶ್ಯಕವಾಗಿದೆ. ದೇಶದ ಜನ ಶ್ರೀಮಂತವಾಗಿದ್ದರೆ ದೇಶ ಅಭಿವೃದ್ಧಿಯಾದಂತೆ. ರಾಜ್ಯದಲ್ಲಿ ದುಡಿಯುವ ವರ್ಗಕ್ಕೆ ಆರ್ಥಿಕ ಶಕ್ತಿಯನ್ನು ನೀಡಿದರೆ ರಾಜ್ಯದ ಆರ್ಥಿಕ ಶಕ್ತಿ ವೃದ್ಧಿಸುತ್ತದೆ. ಕಟ್ಟಡ ಕಾರ್ಮಿಕರು, ವಲಸೆ ಬಂದಿರುವವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವುದು ಉತ್ತಮ ಕಾರ್ಯವಾಗಿದೆ ಎಂದು ಸಿಎಂ ಶ್ಲಾಘಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next