Advertisement
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಒಳಗೊಂಡ “ಜನಸ್ವರಾಜ್’ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸ್ವಾಭಿಮಾನಿ, ಆತ್ಮನಿರ್ಭರ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಆಗಿದ್ದು, ಗ್ರಾಮೀಣಾಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಜಲಜೀವನ್ ಮೂಲಕ ಪ್ರತೀ ಮನೆಗೆ ಶುದ್ಧ ಕುಡಿಯುವ ನೀರು, ನರೇಗಾ ಯೋಜನೆಯಲ್ಲಿ 100 ಮಾನವ ದಿನಗಳ ಉದ್ಯೋಗವನ್ನು 150 ದಿನಕ್ಕೆ ಏರಿಕೆ, ಆರೋಗ್ಯ, ಮೂಲಸೌಕರ್ಯ, ಸ್ವಚ್ಛತೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಲಕ್ಷಾಂತರ ಕೋಟಿ ರೂ.ಗಳನ್ನು ಮೋದಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದರು.
Related Articles
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಒಂದೂವರೆ ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪೂರ್ವಭಾವಿಯಾಗಿ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಅತ್ಯಂತ ಮಹತ್ವದಾಗಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾತನಾಡಿ, ಸಹಕಾರ ಕ್ಷೇತ್ರಕ್ಕೆ ರಾಜ್ಯ ಸರಕಾರ ಹೆಚ್ಚಿನ ಒತ್ತು ನೀಡಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
Advertisement
ಸಚಿವ ಎಸ್. ಅಂಗಾರ ಸ್ವಾಗತಿಸಿ, ಪ್ರಸ್ತಾವನೆಗೈದು, ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಮ್ಮ ವಿರೋಧಿಗಳು ನಡೆಸುತ್ತಿರುವ ಅಪಪ್ರಚಾರಗಳಿಗೆ ಉತ್ತರ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರಿಗೆ ಆಮಿಷಗಳನ್ನು ಒಡ್ಡುವ ಕಾರ್ಯ ನಡೆಯುತ್ತಿದೆ. ಇದಕ್ಕೆ ಅವರು ಒಳಗಾಗುವವರಲ್ಲ ಎಂಬುದನ್ನು ಅಮಿಷ ಒಡ್ಡುವವರು ಅರ್ಥಮಾಡಿಕೊಳ್ಳಬೇಕು ಎಂದರು.
ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾೖಕ್ ಉಳಿಪಾಡಿ, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಡಾ| ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ರಾಜ್ಯ ಉಪಾಧ್ಯಕ್ಷ ಎಂ. ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ವಿವಿಧ ನಿಗಮಗಳ ಅಧ್ಯಕ್ಷರಾದ ನಿತಿನ್ ಕುಮಾರ್, ಹರಿಕೃಷ್ಣ ಬಂಟ್ವಾಳ, ಸಂತೋಷ್ ಕುಮಾರ್ ರೈ ಬೋಳಿಯಾರು, ರವೀಂದ್ರ ಶೆಟ್ಟಿ ಉಳಿದೊಟ್ಟು, ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಯಾತ್ರೆಯ ಸಹ ಸಂಚಾಲಕ ವಿನಯ್ ಬಿದರೆ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಸಹಪ್ರಭಾರಿ ಭಾರತೀಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷ ತಿಲಕ್‌ರಾಜ್ ಕೃಷ್ಣಾಪುರ ವಂದಿಸಿದರು. ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ ನಿರೂಪಿಸಿದರು. ಕೋಟ ಇಂದು ನಾಮಪತ್ರ ಸಲ್ಲಿಕೆ
“ದ.ಕ-ಉಡುಪಿ ಸ್ಥಳೀಯಾ ಡಳಿತ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಲಾಗಿದ್ದು, ಶನಿವಾರ ಬೆಳಗ್ಗೆ 11.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ’ ಎಂದು ಕೋಟ ಶ್ರೀನಿವಾಸ ಪೂಜಾರಿ ಸಮಾವೇಶದಲ್ಲಿ ಘೋಷಿಸಿದರು. ಕಳೆದ 3 ಅವಧಿಗಳಲ್ಲಿ ವಿಧಾನ ಪರಿಷತ್ ಸದಸ್ಯನಾಗಿ, ಸಚಿವನಾಗಿ ಸ್ಥಳೀಯಾಡಳಿತ ಸಂಸ್ಥೆಗಳ ಉನ್ನತಿಗೆ, ಸದಸ್ಯರ ಗೌರವಧನ ಹೆಚ್ಚಳಕ್ಕೆ ಶ್ರಮಿಸಿದ್ದೇನೆ ಎಂದರು.