Advertisement
ಕರ್ನಾಟಕ ಮಾಧ್ಯಮ ಅಕಾಡೆಮಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪತ್ರಕರ್ತರ ಸಂಘಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಬುಡಕಟ್ಟು ಸಮುದಾಯದ ಸಬಲೀಕರಣದಲ್ಲಿ ಮಾಧ್ಯಮಗಳ ಪಾತ್ರ ಮತ್ತು ಕಲ್ಯಾಣ ಕಾರ್ಯಕ್ರಮಗಳು ಮತ್ತು ನವ ಮಾಧ್ಯಮಗಳ ನೆರವು ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಅವುಗಳಿಗೆ ಸರ್ಕಾರ ಪ್ರೋತ್ಸಾಹ ನೀಡುವ ಅಗತ್ಯವಿದ್ದು, ಆಗ ಮತ್ತಷ್ಟು ಅಗತ್ಯ ವಿಚಾರಗಳು, ಸಲಹೆಗಳು ಹೊರ ಬರುತ್ತವೆ. ಅಲ್ಲದೆ ಬುಡಕಟ್ಟು ಸಮುದಾಯದ ಮಕ್ಕಳಿಗೆ ಅವರ ಆಸಕ್ತಿಯ ವಿಷಯಗಳನ್ನು ಪಠ್ಯವನ್ನಾಗಿಸಿದಲ್ಲಿ, ಮಕ್ಕಳು ಆಸಕ್ತಿಯಿಂದ ಕಲಿಯುತ್ತಾರೆ. ಆದರೆ, ಪ್ರಸ್ತುತ ಇರುವ ಆಶ್ರಮ ಶಾಲೆಗಳು ಬುಡಕಟ್ಟು ಸಂಸ್ಕೃತಿಗೆ ವಿರುದ್ಧವಾದ ಶಿಕ್ಷಣ ನೀಡುತ್ತಿರುವುದರಿಂದ ಶಾಲೆ ಬಿಡುವವರು ಹೆಚ್ಚಾಗಿ, ಅನೇಕರು ಕೂಲಿ ಕೆಲಸಗಳಿಗೆ ಹೋಗುತ್ತಿದ್ದಾರೆ ಎಂದರು.
ವ್ಯವಸ್ಥೆಯಿಂದ ಬಡತನ: ಪ್ರಸ್ತುತ ಸಂದರ್ಭದಲ್ಲಿ ಬುಡಕಟ್ಟು ಸಮುದಾಯದ ಸ್ಥಿತಿ ಅತ್ಯಂತ ಹೀನಾಯವಾಗಿದ್ದು, ಇವರುಗಳಿಗೆ ರಾಜಕೀಯ, ಆರ್ಥಿಕ ಶಕ್ತಿ ಇಲ್ಲದ ಪರಿಣಾಮ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಮಾಧ್ಯಮಗಳೂ ಬುಡಕಟ್ಟು ಸಮುದಾಯದ ಸಮಸ್ಯೆಗಳು, ಇನ್ನಿತರ ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತಿಲ್ಲ.
ಇದರಿಂದಾಗಿ ಬುಡಕಟ್ಟು ಸಮುದಾಯದ ಸಮಸ್ಯೆಗಳು ಆಳುವ ವರ್ಗದ ಗಮನಕ್ಕೆ ಭಾರದಂತಾಗಿದ್ದು, ಅವರ ಸಮಸ್ಯೆಗಳು ಬಗೆಹರಿಯದೆ ಮತ್ತಷ್ಟು ಉಲ್ಬಣಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಬುಡಕಟ್ಟು ಜನರ ಹಕ್ಕುಗಳು ಏನೆಂಬುದನ್ನು ಅರಿತುಕೊಂಡು, ಅವುಗಳ ಬಗ್ಗೆ ಪ್ರತಿಪಾದಿಸಬೇಕು. ಆ ಮೂಲಕ ಬುಡಕಟ್ಟು ಜನರ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಹೇಳಿದರು.
ಜನರ ಧನಿಯಾಗಬೇಕು: ವಿಚಾರ ಸಂಕಿರಣ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಿ.ರಂದೀಪ್ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಬುಡಕಟ್ಟು ಸಮುದಾಯದ ಜನರು ಧನಿ ಇಲ್ಲದಂತಾಗಿದ್ದು, ಬಹುತೇಕ ಸಂದರ್ಭಗಳಲ್ಲಿ ಕೆಲವು ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ಬಂದಿರುವುದಿಲ್ಲ, ಇಂತಹ ಸಂದರ್ಭದಲ್ಲಿ ಮಾಧ್ಯಮಗಳು ಅಧಿಕಾರಿಗಳನ್ನು ಜಾಗೃತರನ್ನಾಗಿಸಬೇಕು.
ಬುಡಕಟ್ಟು ಜನರಿಗೆ ಜಮೀನು ನೀಡುವ ಕೆಲಸ ಮೈಸೂರಿನಲ್ಲೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ವೈಯಕ್ತಿಕ ಅರ್ಜಿಗಳಿಗಿಂತ ಸಮುದಾಯ ಆಧಾರಿತ ಅರ್ಜಿಗಳು ಹೆಚ್ಚಾಗಿ ಸಲ್ಲಿಕೆಯಾಗಿದ್ದರಿಂದ ಮತ್ತು ಕೆಲವೊಂದು ಅರ್ಜಿಗಳ ಸಲ್ಲಿಕೆ ವಿಳಂಬವಾಗಿರುವುದರಿಂದ ಭೂಮಿ ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. ತಮ್ಮ ಅರ್ಜಿ ತಿರಸ್ಕೃತಗೊಂಡಿದ್ದರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾವು ಪ್ರಶ್ನಿಸಬಹುದಾಗಿದೆ ಎಂದರು.
ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು, ಸದಸ್ಯ ಕೆ. ಶಿವಕುಮಾರ್, ಕಾರ್ಯದರ್ಶಿ ಶಂಕರಪ್ಪ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ರಾಜ್ಯ ಗಿರಿಜನ ಸಂಶೋಧನ ಸಂಸ್ಥೆ ನಿರ್ದೇಶಕ ಡಾ.ಟಿ.ಟಿ.ಬಸವನಗೌಡ, ಐಟಿಡಿಪಿ ಅಧಿಕಾರಿ ಸಿ.ಶಿವಕುಮಾರ್, ಪತ್ರಕರ್ತ ಮುತ್ತುನಾಯ್ಕರ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಆರ್. ರಾಜು ಹಾಜರಿದ್ದರು.