ಕೊಟ್ಟಿಗೆಹಾರ: ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಬಂದೂಕಿನ ಖಾಲಿ ಕಾಟ್ರೇಜ್ ಗಳು ಪತ್ತೆಯಾಗಿದೆ.
ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ 60ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರೇಜ್ ಗಳು ಪತ್ತೆಯಾಗಿದೆ. ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಕಾಟ್ರೇಜ್ ಗಳು ಖಾಲಿ ಪತ್ತೆಯಾಗಿದೆ.
ಒಂದೇ ಕಡೆ 60ಕ್ಕೂ ಹೆಚ್ಚು ಕಾಟ್ರೇಜ್ ಪತ್ತೆಯಾಗಿರುವುದರಿಂದ ಹಲವು ಅನುಮಾನಗಳು ವ್ಯಕ್ತವಾಗಿದೆ. ಕಾಡು ಪ್ರಾಣಿಗಳು ಸಾರಗೋಡು ತತ್ಕೋಳ ಮೀಸಲು ಅರಣ್ಯದಲ್ಲಿ ಹೆಚ್ಚಿವೆ. ಇದರಿಂದ ಕಾಟ್ರೇಜ್ ಗಳು ಕಾಡು ಪ್ರಾಣಿಗಳ ಶಿಕಾರಿಗಾಗಿ ಬಳಕೆಯಾಗಿತ್ತಾ ಎನ್ನುವ ಅನುಮಾನವೂ ವ್ಯಕ್ತವಾಗಿದೆ.
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.ಅನಧಿಕೃತ ಬಂದೂಕುಗಳ ವಶದ ಬೆನ್ನಲ್ಲೆ ಖಾಲಿ ಕಾಟ್ರೇಜ್ ಗಳು ಪತ್ತೆಯಾಗಿದೆ.
Related Articles