Advertisement

Jammu -Kashmir ಅನಂತನಾಗ್‌ನಲ್ಲಿ ಎನ್‌ಕೌಂಟರ್‌ ಆರಂಭ

10:36 AM May 14, 2023 | Team Udayavani |

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

Advertisement

ಈ ಸಂಬಂಧ ಟ್ವೀಟ್‌ ಮಾಡಿರುವ ಕಾಶ್ಮೀರ ಝೋನ್ ಪೊಲೀಸರು, ಅನಂತ್‌ನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ಮುಂಜಾನೆ, ಭಾರತೀಯ ಸೇನಾ ಪಡೆಗಳು ಜಮ್ಮು – ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದವು ಎಂದು ಸೇನಾ ಮೂಲಗಳು ಎನ್ ಐಗೆ ತಿಳಿಸಿವೆ.


ಈ ವೇಳೆ, ಭಯೋತ್ಪಾದಕರು ಮತ್ತು ಭಾರತೀಯ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಮೇ 3 ರಂದು, ಭಾರತೀಯ ಸೇನೆಯು ಕುಪ್ವಾರದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತು ಮತ್ತು ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿತು.

Advertisement

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ…

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next