Advertisement

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

10:04 PM May 07, 2024 | Team Udayavani |

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಮಂಗಳವಾರ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಕುಲ್ಗಾಮ್‌ನ ರೆದ್ವಾನಿ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿಯಿಂದಲೇ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.

ಬಳಿಕ ಮಂಗಳವಾರ ಬೆಳ್ಳಂಬೆಳಗೆ ಉಗ್ರರು ಅಡಗಿದ್ದ ಮನೆ ಪತ್ತೆಹಚ್ಚಿದಾಗ ಸಿಬ್ಬಂದಿ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಅವರು ಯಾವ ಉಗ್ರಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next