Advertisement

ಜಮ್ಮು ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆಗಳು

02:41 PM Sep 25, 2022 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಮಚಿಲ್ ಎಂಬಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಘಟನೆ ರವಿವಾರ ನಡೆದಿದೆ.

Advertisement

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್‌ ನ ಟೆಕ್ರಿ ನಾರ್ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಎನ್‌ ಕೌಂಟರ್ ನಡೆದಿದೆ.

ಉಗ್ರರಿಂದ ಎರಡು ಎಕೆ-47 ರೈಫಲ್‌ಗಳು, ಎರಡು ಪಿಸ್ತೂಲ್‌ಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರ ಗುರುತು ಪತ್ತೆ ಸಾಧ್ಯವಾಗಿಲ್ಲ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, “ಭಾರತೀಯ ಸೇನೆ ಮತ್ತು ಕುಪ್ವಾರ ಪೊಲೀಸರು ಇಬ್ಬರು ಉಗ್ರರನ್ನು ಕುಪ್ವಾರ ಜಿಲ್ಲೆಯ ಮಚಿಲ್‌ ನ ಟೆಕ್ರಿ ನಾರ್ ಪ್ರದೇಶದಲ್ಲಿ ಹತ್ಯೆ ಮಾಡಿವೆ. ಹತ್ಯೆಯಾದ ಉಗ್ರರ ಗುರುತು ಪತ್ತೆ ಮಾಡುವ ಕೆಲಸವಾಗುತ್ತಿದೆ. ಎರಡು ಎಕೆ-47 ರೈಫಲ್‌ಗಳು, ಎರಡು ಪಿಸ್ತೂಲ್‌ಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್‌ ಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಉಸಿರಾಟದ ಸಮಸ್ಯೆ; ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ

Advertisement

ಸುಮಾರು 10 ದಿನಗಳ ಹಿಂದೆ ಖಚಿತ ಮಾಹಿತಿಯನ್ನು ಆಧರಿಸಿ ಕಾಶ್ಮೀರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಈ ಕಾರ್ಯಾಚರಣೆಯು ಶ್ರೀನಗರದ ನೌಗಾಮ್ ಪ್ರದೇಶದಲ್ಲಿ ನಡೆದಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next