ಶ್ರೀನಗರ; ಜಮ್ಮು ಕಾಶ್ಮೀರದ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭಧ್ರತಾ ಪಡೆಗಳು ಸಫಲವಾಗಿದೆ. ಇಂದು ಮುಂಜಾನೆ ಈ ಕಾರ್ಯಾಚರಣೆ ನಡೆದಿದ್ದು, ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನಿಪೋರಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪ್ರತಿ ದಾಳಿ ನಡೆಸಿದ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ಭಾರತೀಯ ಸೇನೆ, ಸಿಆರ್ ಪಿಎಫ್ ಯೋಧರು ಮತ್ತು ಸ್ಥಳೀಯ ಪೊಲೀಸರು ಕಾರ್ಯಾಚರಣೆಯಲ್ಲಿ ಫಾಲ್ಗೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಮಧ್ಯರಾತ್ರಿಯ ವೇಳೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಬೆಳಗ್ಗಿನ ಜಾವ ಉಗ್ರರನ್ನು ಹೊಡೆದುರುಳಿಸಿದೆ.
ಘಟನಾ ಸ್ಥಳದಿಂದ ಹತರಾದ ಉಗ್ರರ ಮೃತದೇಹಗಳು ವಶಕ್ಕೆ ಪಡೆಯಲಾಗಿದ್ದು, ಗುರುತಿಸುವಿಕೆ ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ.
ಈ ವರ್ಷದ ಇದುವರೆಗಿನ 36 ಕಾರ್ಯಾಚರಣೆಗಳಲ್ಲಿ ಒಟ್ಟು 88 ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಕೆಡವಿ ಹಾಕಿದೆ ಎಂದು ಜಮ್ಮು ಕಾಶ್ಮೀರದ ಡಿಜಿಪಿ ಆಗಿರುವ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.