Advertisement

ಎನ್‌ಕೌಂಟರ್‌: ಸೇನಾ ಮೇಜರ್‌ ಹುತಾತ್ಮ, 3 ಯೋಧರಿಗೆ ಗಾಯ

01:03 AM Jun 18, 2019 | mahesh |

ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ವೊಂದರಲ್ಲಿ ಸೇನೆಯ ಮೇಜರ್‌ವೊಬ್ಬರು ಹುತಾತ್ಮರಾಗಿ, ಮತ್ತೂಬ್ಬ ಅಧಿಕಾರಿ ಹಾಗೂ ಇಬ್ಬರು ಯೋಧರು ಗಾಯಗೊಂಡ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ.

Advertisement

ಅನಂತ್‌ನಾಗ್‌ ಜಿಲ್ಲೆಯ ಅಚಬಾಲ್‌ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿ ವೇಳೆ ಇವರು ಪ್ರಾಣತೆತ್ತಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಖಚಿತ ಸುಳಿವಿನ ಮೇರೆಗೆ ಭದ್ರತಾ ಪಡೆ ಸೋಮವಾರ ಬೆಳಗ್ಗೆ ಶೋಧ ಕಾರ್ಯ ಆರಂಭಿಸಿತ್ತು. ಈ ವೇಳೆ, ಅವಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸತೊಡಗಿದರು. ಕೂಡಲೇ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿತು.

ಕೆಲ ಗಂಟೆಗಳ ಕಾಲ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾ ಚರಣೆಯಲ್ಲಿ ಸೇನೆಯ ಮೇಜರ್‌ವೊಬ್ಬರು ಮೃತಪಟ್ಟಿದ್ದಾರೆ. ಮತ್ತೂಬ್ಬರು ಮೇಜರ್‌ ಹಾಗೂ ಇಬ್ಬರು ಯೋಧರು ಗಾಯಗೊಂಡಿದ್ದು, ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೋಧನಿಗೆ ಗಾಯ: ಜಮ್ಮು-ಕಾಶ್ಮೀರದ ಪೂಂಛ… ಜಿಲ್ಲೆಯ ಎಲ್‌ಒಸಿಯಲ್ಲಿ ಪಾಕಿ ಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ಜತೆಗೆ, 11 ವರ್ಷದ ಬಾಲಕಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ಗುರಿಯಾಗಿಸಿ ಐಇಡಿ ಸ್ಫೋಟ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಸೇನಾ ಬೆಂಗಾವಲನ್ನು ಗುರಿಯಾಗಿಸಿಕೊಂಡು ಉಗ್ರರು ಸುಧಾರಿತ ಸ್ಫೋಟಕಗಳನ್ನು ಸ್ಫೋಟಿಸಿದ್ದಾರೆ. ಪರಿಣಾಮ, 9 ಯೋಧರು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಅರಿಹಾಲ್‌-ಲಸ್ಸಿಪೋರಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಫೆ.14ರಂದು 40 ಸಿಆರ್‌ಪಿಎಫ್ ಯೋಧರನ್ನು ಬಲಿತೆಗೆದು ಕೊಂಡ ಪುಲ್ವಾಮಾದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಯಿಂದ 27 ಕಿ.ಮೀ. ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next