ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ತಡರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದೆ.
ಮೂರರಿಂದ ನಾಲ್ಕು ಮಂದಿ ಭಯೋತ್ಪಾದಕರು ಇರುವ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಗ್ರಾಮ ಭಾರತ: ಸಾಗರದಷ್ಟು ಸಮಸ್ಯೆಗಳಿಗೆ ಸಾಸಿವೆಯಷ್ಟೇ ಪರಿಹಾರ !
ದಕ್ಷಿಣ ಕಾಶ್ಮೀರದ ಪುಲ್ವಾಮದ ರಾಜಪೊರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದಾರೆ. ಗುರುವಾರ ತಡರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದೆ.
ಒಳಗೆ ಅಡಗಿರುವ ಉಗ್ರರು ಆರಂಭದಲ್ಲಿ ಭದ್ರತಾ ಪಡೆಯತ್ತ ಗುಂಡು ಹಾರಿಸಿದರು. ಇದಕ್ಕೆ ಸೇನೆ ಪ್ರತಿ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.