ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಓರ್ವ ಪ್ಯಾರಾಮಿಲಿಟರಿ ಅಧಿಕಾರಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಅಧಿಕಾರಿ ಮತ್ತು ಇನ್ನೊಬ್ಬ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಮನೆ ಬಿಟ್ಟು ಬೆಂಗಳೂರಿಗೆ ಬಂದಿದ್ದ ಯುವತಿಗೆ ಕೆಲಸ ಕೊಡುವುದಾಗಿ ನಂಬಿಸಿ ಅತ್ಯಾಚಾರ
ಬಿಜಾಪುರದ ಉಸೂರ್ ಬ್ಲಾಕ್ ನ ಅರಣ್ಯ ಪ್ರದೇಶದಲ್ಲಿ ಸಿಆರ್ಪಿಎಫ್ನ 168 ಬೆಟಾಲಿಯನ್ ಮತ್ತು ಮಾವೋವಾದಿಗಳ ನಡುವೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮ್ಲೋಚನ್ ಕಶ್ಯೂಪ್ ಹೇಳಿದ್ದಾರೆ. ಈ ಪ್ರದೇಶವು ರಾಜ್ಯದ ರಾಜಧಾನಿ ರಾಯ್ಪುರದಿಂದ ಸುಮಾರು 440 ಕಿಮೀ ದೂರದಲ್ಲಿದೆ.
ಈ ಗುಂಡಿನ ಚಕಮಕಿಯಲ್ಲಿ ಜಾರ್ಖಂಡ್ ಮೂಲದ ಸಹಾಯಕ ಕಮಾಂಡೆಂಟ್ ಎಸ್ ಬಿ ಟಿರ್ಕಿ ಸಾವನ್ನಪ್ಪಿದ್ದಾರೆ. ಸದ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ.