Advertisement

ಛತ್ತೀಸ್‌ ಗಢದಲ್ಲಿ ನಕ್ಸಲರ ಅಟ್ಟಹಾಸ: ಮೂವರು ಪೊಲೀಸ್ ಸಿಬ್ಬಂದಿಯ ಹತ್ಯೆ

12:35 PM Feb 25, 2023 | Team Udayavani |

ರಾಯ್ಪುರ: ಛತ್ತೀಸ್‌ ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಸೇರಿದಂತೆ ಮೂವರು ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಗುಂಡಿನ ಕಾಳಗ ನಡೆದಿದೆ. ಜಗರ್ಗುಂಡ ಮತ್ತು ಕುಂಡಡ್ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್ ರಾಜ್ ಹೇಳಿದ್ದಾರೆ.

ರಾಜಧಾನಿ ರಾಯ್ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಜಗರ್ಗುಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಕ್ಷಣಾ ತಂಡವು ಕಾರ್ಯಾಚರಣೆ ನಡೆಸುತ್ತಿತ್ತು.  ಎಎಸ್ಐ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬರ್ ಕುಂಜಮ್ ಜೋಗಾ ಮತ್ತು ವಂಜಮ್ ಭೀಮಾ ಅವರು ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next