ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಫಾರ್ವರ್ಡ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳ ತಂಡ ಹತ್ಯೆಗೈದಿದ್ದು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದರ ನಡುವೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಶನಿವಾರ 4 ನೇ ದಿನಕ್ಕೆ ಮುಂದುವರೆದಿದ್ದು ಈ ವೇಳೆ ದೊಡ್ಡ ದೊಡ್ಡ ಸ್ಫೋಟದ ಸದ್ದುಗಳು ಕೇಳಿಬಂದಿವೆ ಜೊತೆಗೆ ಭಯೋತ್ಪಾದಕರ ಪತ್ತೆಗೆ ಡ್ರೋನ್ ಕಣ್ಗಾವಲು ಕೂಡ ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Rahul Navin: ಜಾರಿ ನಿರ್ದೇಶನಾಲಯದ ಪ್ರಭಾರ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ