Advertisement

ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸಿ: ಪ್ರಮೋದ್‌ ಮಧ್ವರಾಜ್‌

03:45 AM Jul 06, 2017 | Harsha Rao |

ಉಡುಪಿ: ಪೋಷಕರು, ಶಿಕ್ಷಕರು ಪ್ರತಿಯೊಂದು ಮಗುವಿನ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಬೇಕು. ಪ್ರಸ್ತುತ ವರ್ಷದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಚಿಗುರು ಕಾರ್ಯಕ್ರಮವನ್ನು ಹಮ್ಮಿ ಕೊಂಡಿರುವುದು ಸಂತಸದ ವಿಷಯ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು. 

Advertisement

ಅವರು ಶುಕ್ರವಾರ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡುವಿನ ನಲಂದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಕ್ಕಳ ಸಾಂಸ್ಕೃತಿಕ ಹಬ್ಬ ಚಿಗುರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಓದುವುದರ ಜತೆ ಜತೆಗೆ ವಿವಿಧ ಕಲೆಗಳಾದ ಸಂಗೀತ, ನೃತ್ಯ, ನಾಟಕ ಮುಂತಾದವುಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕು ಹಾಗೂ ಮಕ್ಕಳ ಈ ಪ್ರತಿಭೆಯನ್ನು ಪ್ರೋತ್ಸಾಹಿಸುವ ಗುಣ ನಮ್ಮೆಲ್ಲರಲ್ಲಿÉ ಬರಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕಲೆಯನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದರು.  ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಉಪಸ್ಥಿತರಿದ್ದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್‌ ಸ್ವಾಗತಿಸಿದರು. ವಿದ್ಯಾರ್ಥಿ ನಚಿಕೇತ್‌ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲಾ ವಂದಿಸಿದರು. ಶಾಸ್ತೀಯ ವಾದ್ಯ ಸಂಗೀತ, ಶಾಸ್ತ್ರೀಯ ಸಂಗೀತ, ದಾಸರಪದಗಳು, ಜನಪದಗೀತೆಗಳು, ಸಮೂಹ ನೃತ್ಯ, ಭರತನಾಟ್ಯ, ನಾಟಕ, ಏಕಪಾತ್ರಾಭಿನಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. 

Advertisement

Udayavani is now on Telegram. Click here to join our channel and stay updated with the latest news.

Next