Advertisement

ಮಕ್ಕಳ ಪ್ರತಿಭೆ ಎಲ್ಲರೂ ಪ್ರೋತ್ಸಾಹಿಸಿ

05:25 PM Sep 01, 2017 | |

ಯಾದಗಿರಿ: ಪ್ರತಿಭಾ ಕಾರಂಜಿ ಮೂಲಕ ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ. ಆದ್ದರಿಂದ ವೇದಿಕೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಮರೆಡ್ಡಿ ತಂಗಡಗಿ ಹೇಳಿದರು.

Advertisement

ನಗರದ ಚಿರಂಜೀವಿ ಮೆಥೋಡಿಸ್ಟ್‌ ಪ್ರೌಢಶಾಲೆಯ ಆವರಣದಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಾರ್ಯಾಲಯ ಆಶ್ರಯದಲ್ಲಿ ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಹಾಗೂ
ಕಲೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರು ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಬೇಕು ಎಂದರು.

ಜಿಪಂ ಸದಸ್ಯ ಶಿವಲಿಂಗಪ್ಪ ಪುಟಗಿ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳು ಜೀವನದಲ್ಲಿ ಬೆಳೆಯಲು ಇಂತಹ ವೇದಿಕೆಗಳು ಅವಕಾಶ ನೀಡುತ್ತವೆ. ಯಾವ ಮಕ್ಕಳಲ್ಲಿ ಎಂತಹ ಪ್ರತಿಭೆ ಅಡಗಿದೆ ಎಂಬವುದು ಶಿಕ್ಷಕರು ಗುರುತಿಸಬೇಕು. ವೇದಿಕೆ ಕಲ್ಪಿಸಬೇಕು ದೊಡ್ಡ ದೊಡ್ಡ ಕಲಾವಿದರೆಲ್ಲರೂ ಇಂತಹ ವೇದಿಕೆಗಳಿಂದಲೆ ಸಾಧನೆ ಮಾಡಿದ್ದಾರೆ. ಅವರೆಲ್ಲರೂ ಪ್ರೇರಣೆಯಾಗಬೇಕು ಎಂದು ನುಡಿದರು.
ಕ್ಷೇತ್ರ ಶಿಕ್ಷಣಾ ಧಿಕಾರಿ ರುದ್ರಗೌಡ ಮಾತನಾಡಿ, ಶಾಲಾ ಮಕ್ಕಳಲ್ಲಿ ಅಡಗಿರುವ ಸೂಕ್ತವಾದ ಕೌಶಲ್ಯಗಳನ್ನು ಹೊರ ಹಾಕಲು ಈ ವೇದಿಕೆಗಳು ಅವಕಾಶ ಕಲ್ಪಿಸಿಕೊಡುತ್ತದೆ. ಇದರ ಲಾಭ ಪಡೆದುಕೊಳ್ಳಬೇಕು ಎಂದರು. ವಿವಿಧ ಶಾಲಾ ಮಕ್ಕಳು ಸಮೂಹಿಕ ನೃತ್ಯ, ಕಂಠಪಾಠ, ಹಾಡು,
ಕಥೆ, ಏಕಪಾತ್ರ ಅಭಿನಯ, ಪ್ರದರ್ಶಿಸಿ ಗಮನ ಸೆಳೆದರು. ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಶಿಕಾಂತ ಕಶೆಟ್ಟಿ, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ ಹೊನಗೇರಾ, ತಾಪಂ ಅಧ್ಯಕ್ಷ ಬಾಷು ರಾಠೊಡ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next