Advertisement

ಪುರಸ್ಕಾರದಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ

11:50 AM Jul 17, 2017 | |

ಬೆಂಗಳೂರು: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ಹುಟ್ಟಿಸುವ ಮೂಲಕ ಮುಂದಿನ ಪರೀಕ್ಷೆಗಳಲ್ಲಿ ಇನ್ನು ಹೆಚ್ಚಿನ ಸಾಧನೆ ಮಾಡಲು ಪ್ರೇರಣೆಯಾಗಲಿವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಅರವಿಂದ ಲಿಂಬಾವಳಿ ಅಭಿಪ್ರಾಯಪಟ್ಟಿದ್ದಾರೆ. 

Advertisement

ನಗರದ ಯಶವಂತಪುರದಲ್ಲಿ ಭಾನುವಾರ ನಡೆದ ವಿಪ್ರ ಪ್ರಕಾಶ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.60ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಅವರು, “ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಬೆಳೆಯಲು ಹೊಸ ಚೈತನ್ಯ ನೀಡುತ್ತದೆ. ಹಾಗೆಯೇ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಇಂಥ ಹಲವಾರು ಕಾರ್ಯಕ್ರಮ ನಡೆಯುವ ಅಗತ್ಯವಿದೆ,’ ಎಂದರು. 

ಮಲ್ಲೇಶ್ವರಂ ಬ್ರಾಹ್ಮಣ ಸಭಾದ ಅಧ್ಯಕ್ಷ ಪ್ರಕಾಶ್‌ ಎಸ್‌.ಅಯ್ಯಂಗಾರ್‌ ಮಾತನಾಡಿ, “ಬ್ರಾಹ್ಮಣ ಸಮಾಜದ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಮಲ್ಲೇಶ್ವರಂ ಬ್ರಾಹ್ಮಣ ಸಭಾ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬ್ರಾಹ್ಮಣ ಸಮಾಜದ ಜನರು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಒಗ್ಗಟ್ಟಾಗುವ ಅವಶ್ಯಕತೆ ಇದೆ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ 60ಕ್ಕೂ ಹೆಚ್ಚು ಅಂಕಗಳಿಸಿದ ಸುಮಾರು 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕ್ರಮವಾಗಿ ಒಂದು ಸಾವಿರ ಹಾಗೂ ಎರಡೂ ಸಾವಿರ ರೂ.ಗಳನ್ನು ನೀಡಿ ಪುರಸ್ಕರಿಸಲಾಯಿತು. ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಲಕ್ಷ್ಮೀಕಾಂತ್‌, ನಾರ್ಥ್ ಬೆಂಗಳೂರು ಎಜುಕೇಷನ್‌ ಸೊಸೈಟಿ ಉಪಾಧ್ಯಕ್ಷ ಡಿ.ವಿ. ಕೃಷ್ಣಮೂರ್ತಿ, ಸಮಾಜ ಸೇವಕ ಬಿ.ಎನ್‌.ಕೃಷ್ಣಮೂರ್ತಿ  ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next