Advertisement

ಬುಡಕಟ್ಟು ಜನರ ಕುಲಕಸುಬು ಪ್ರೋತ್ಸಾಹಿಸಿ

12:30 PM Apr 22, 2017 | Team Udayavani |

ಮೈಸೂರು: ಕುಲಕಸುಬುಗಳನ್ನು ಪೋ›ತ್ಸಾಹಿಸುವುದರಿಂದ ಮಾತ್ರ ಬುಡಕಟ್ಟು ಜನರನ್ನು ಅಭಿವೃದ್ಧಿಪಡಿಸಲು ಸಾಧ್ಯ. ಇದಕ್ಕಾಗಿಯೇ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 200 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಟಿ ಬಸವನಗೌಡ ಹೇಳಿದರು.

Advertisement

ಬುಡಕಟ್ಟು ಸಮುದಾಯದವರ ಸರ್ವಾಂಗೀಣ ಅಭಿವೃದ್ಧಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿ, ವರು ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಂಡು ಬರುವ ಅರಣ್ಯ ಪ್ರದೇಶಗಳಲ್ಲಿ ಬುಡಕಟ್ಟು ಸಮುದಾಯದವರು ಬಹಳ ಕಷ್ಟಕರ ಜೀವನ ನಡೆಸುತ್ತಿದ್ದು ತೀರಾ ಹಿಂದುಳಿದಿದ್ದಾರೆ. ಇದನ್ನು ಮನಗಂಡ ಸರ್ಕಾರವು ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಬರಲು ಅನುಕೂಲವಾಗುವಂತೆ ವಿಶೇಷ ಯೋಜನೆಯನ್ನು ಸಿದ್ಧಪಡಿಸಿದೆ ಎಂದರು.

ಸರ್ಕಾರವು ರೂಪಿಸಿರುವ ವಿಶೇಷ ಯೋಜನೆಯಡಿ ಅವರಿಗೆ ಶಿಕ್ಷಣ ಕಲಿಯಲು ವಾಸಿಸುವ ಸ್ಥಳದಲ್ಲಿಯೇ ಶಾಲೆಗಳನ್ನು ತೆರೆದು ಅವರ ಮಕ್ಕಳಿಗೆ ವಿದ್ಯಾರ್ಜನೆ ನೀಡಲಾಗುತ್ತಿದೆ. ಈ ವೇಳೆ ಮಕ್ಕಳಿಗೆ ಅವಶ್ಯವಿರುವ ಪಠ್ಯಪುಸ್ತಕಗಳು, ಲೇಖನ ಸಾಮಗ್ರಿಗಳು ಸೇರಿದಂತೆ ವಿದ್ಯಾರ್ಜನೆಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ತಮ್ಮ ಸಂಸ್ಥೆಯ ವತಿಯಿಂದ ನೀಡಲಾಗುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಬುಡಕಟ್ಟು ಜನಾಂಗದ ಮುಖಂಡ ವಿಠಲ್‌ ಮಾತನಾಡಿ, ಅರಣ್ಯದೊಳಗೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಮೂಲಕ ಕಾಡಿನೊಳಗೆ ವಾಸವಿರುವ ಬುಡಕಟ್ಟು ಜನಾಂಗವನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಿದೆ. ಇದರಿಂದ ಅತ್ತ ಕಾಡಿನಲ್ಲಿಯೂ ವಾಸ ಮಾಡದೆ, ಇತ್ತ ನಾಡಿನ ಸಂಸ್ಕೃತಿಗೂ ಒಗ್ಗಿಕೊಳ್ಳದೆ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಅವರಿಗೆ ಅರಣ್ಯ ಹಕ್ಕು ಪತ್ರಗಳನ್ನು ನೀಡುವ ಮೂಲಕ ಮೂಲ ಕುಲಕಸುಬುಗಳನ್ನು ಪೋ›ತ್ಸಾಹಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next