Advertisement

ಶೈಕ್ಷಣಿಕವಾಗಿ ಸಾಧನೆ ಮಾಡಲು ಉತ್ತೇಜನ ನೀಡಿ

02:02 PM May 25, 2019 | Team Udayavani |

ಚಾಮರಾಜನಗರ: ನಗರದ ಉಪ್ಪಾರ ಬೀದಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisement

ನಗರದ ಭಾರತ ಸೇವಾದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಆಂದೋಲವನ್ನು ಆಯೋಜಿಸಲಾಗಿತ್ತು.

ಜಾಥಾ ಕ್ಕೆ ಚಾಲನೆ ನೀಡಿದ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಎಂ.ರಾಮ ಚಂದ್ರ ಈ ಸಂದರ್ಭದಲ್ಲಿ ಮಾತನಾಡಿ, ಪ್ರತಿಯೊಬ್ಬರು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸುವ ಮೂಲಕ ಶೈಕ್ಷಣಿಕ ವಾಗಿ ಹೆಚ್ಚಿನ ಸಾಧನೆ ಮಾಡಲು ಉತ್ತೇ ಜನ ನೀಡುವಂತೆ ಸಲಹೆ ನೀಡಿ, ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸೇವಾದಳದ ವತಿಯಿಂದ ಸಾರ್ವ ಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಎಲ್ಲಾ ರೀತಿಯಾದ ಸೌಲಭ್ಯಗಳನ್ನು ಕಲ್ಪಿಸಲಾ ಗುತ್ತಿದೆ. ಆದ್ದರಿಂದ ಪೋಷಕರು ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಸಲಹೆ ನೀಡಿದರು.

ಶಿಕ್ಷಣಕ್ಕೆ ಹೆಚ್ಚಿನ ಒತ್ತು : ಸರ್ಕಾರ ಸಹ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಮಕ್ಕಳ ವ್ಯಾಸಂಗಕ್ಕೆ ನೆರವಾಗುವಂತೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿದೆ. ಜೊತೆಗೆ ಮಕ್ಕಳು ಹಸಿವಿನಿಂದ ಬಳಲಬಾರದು ಎಂಬ ಕಾರಣಕ್ಕಾಗಿ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆದ್ದರಿಂದ ಪೋಷಕರು ಮಕ್ಕಲು ಶಾಲೆಯಿಂದ ಹೊರಗುಳಿಯುಯದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

Advertisement

ಪ್ರೋತ್ಸಾಹ ನೀಡಿ:ಸೇವಾದಳದ ತಾಲೂ ಕು ಅಧ್ಯಕ್ಷ ಸಿ.ಎಂ.ನರಸಿಂಹ ಮೂರ್ತಿ ಮಾತನಾಡಿ ಸರ್ಕಾರಿ ಶಾಲೆಗ ಳಲ್ಲಿ ಸಹ ಅನೇಕ ಪ್ರತಿಭಾವಂತ ವಿದ್ಯಾ ರ್ಥಿಗಳಿದ್ದು ಅವರಿಗೆ ಪ್ರೋತ್ಸಾಹ ನೀಡಿ ದರೆ ಎಲ್ಲಾ ರಂಗದಲ್ಲೂ ಮುಂದೆ ಬರು ತ್ತಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರಸಭಾ ಸದಸ್ಯ ಬಸವಣ್ಣ, ಸೇವಾದಳದ ಜಿಲ್ಲಾ ಸಂಘಟಕ ಕೆ. ವೀರಯ್ಯ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಮಲ್ಲನಾಯಕ, ದೈಹಿಕ ಶಿಕ್ಷಕ ಚಿಕ್ಕಬಸವಯ್ಯ, ಸಿ.ಆರ್‌.ಪಿ ಗಂಗಾಂಬಿಕೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭಾರತೀಯ ಸೇವಾದಳದ ಅಧಿ ನಾಯಕ ನಾಗಣ್ಣ, ದೈಹಿಕ ಶಿಕ್ಷಣ ಪರಿವೀಕ್ಷಕ ಆರ್‌.ಶಂಕರ್‌ ಮತ್ತಿರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next