Advertisement

Kambala, ಕ್ರೀಡೆಗೆ ಉತ್ತೇಜನ: ಸಚಿವ ಬಿ. ನಾಗೇಂದ್ರ

11:54 PM Jan 13, 2024 | Team Udayavani |

ಉಳ್ಳಾಲ: ರಾಜ್ಯ ಸರಕಾರ ಮತ್ತು ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಅಭಿಪ್ರಾಯಪಟ್ಟರು.

Advertisement

ಉಳ್ಳಾಲ ತಾಲೂಕಿನ ನರಿಂಗಾನದ ಲವ-ಕುಶ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನದ ಮೋರ್ಲ ಬೋಳದಲ್ಲಿ ನಡೆದ ದ್ವಿತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ “ನರಿಂಗಾನ ಕಂಬಳ್ಳೋತ್ಸ’ವದಲ್ಲಿ ಭಾಗವಹಿಸಿ ಮಿತ್ತಕೋಡಿ ಶರತ್‌ ಕಾಜವ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಂಗಳೂರಿನ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಿದಾಗ ಕ್ರೀಡಾ ಇಲಾಖೆ 1 ಕೋಟಿ ರೂ. ಕೊಟ್ಟದೆ.

ಕರಾವಳಿಯಲ್ಲಿ ನಡೆಯುವ ಕಂಬಳಕ್ಕೂ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದರು. ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಮಾತನಾಡಿ ಎಲ್ಲ ಜಾತಿ, ಧರ್ಮದವರು ಸೇರಿ ಮಾಡುವ ಸಾರ್ವಜನಿಕ ಕಂಬಳವಾಗಿದ್ದು, ಇದು ಸೌಹಾರ್ದದ ಪ್ರತೀಕವಾಗಿದೆ ಎಂದರು.

ಮಾಜಿ ಸಚಿವ ರಮಾನಾಥ ರೈ, ವಿಧಾನಸಭಾ ಸದಸ್ಯ ಹರೀಶ ಕುಮಾರ್‌, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಕ್ರೀಡಾ ಕಮಿಷನರ್‌ ಶಶಿಕುಮಾರ್‌, ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಯು. ಕಣಚೂರು ಮೋನು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್‌ ರೈ, ಇಂಟಕ್‌ ರಾಜ್ಯಾಧ್ಯಕ್ಷ ರಾಕೇಶ್‌ ಮಲ್ಲಿ, ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮಂಜನಾಡಿ ದರ್ಗಾ ಅಧ್ಯಕ್ಷ ಅಬ್ದುಲ್‌ ಅಜೀಝ್ ಮೈಸೂರು ಬಾವಾ, ದ.ಕ. ಜಿಲ್ಲಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ, ಮುಂಬಯಿಯ ಉದ್ಯಮಿ ವಿವೇಕ್‌ ಶೆಟ್ಟಿ ಬೊಲ್ಯಗುತ್ತು, ದೇರಳಕಟ್ಟೆಯ ದ ಕಂಫರ್ಟ್ಸ್ ಇನ್‌ನ ಚಂದ್ರಹಾಸ ಶೆಟ್ಟಿ, ರಕ್ಷಿತ್‌ ಶಿವರಾಮ್‌, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ, ಕಟಪಾಡಿ ಕಂಬಳದ ರೋಹಿತ್‌ ಹೆಗ್ಡೆ ಭಾಗವಹಿಸಿದ್ದರು.

Advertisement

ಗೌರವ
ಈ ಸಂದರ್ಭದಲ್ಲಿ ಪಜೀರುಗೇದಗೆ ಬೈಲ್‌ನಲ್ಲಿ ಲವ – ಕುಶ ಕಂಬಳವನ್ನು 25 ವರ್ಷಗಳ ಕಾಲ ಮುನ್ನಡೆಸಿದ ಮಿತ್ತಕೋಡಿ ವೆಂಕಪ್ಪ ಕಾಜವ ಮತ್ತು ಉಮೇಶ್‌ ಮಹಾಬಲ ಶೆಟ್ಟಿ ಮಾಣಿ ಸಾಗು ಅವರನ್ನು ಗೌರವಿಸಲಾಯಿತು.

ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್‌ ಕಾಜವ ಸ್ವಾಗತಿಸಿದರು. ನವಾಝ್ ನರಿಂಗಾನ ಮತ್ತು ಜೋಸೆಫ್‌ ಕುಟಿನ್ಹ ಸಮ್ಮಾನ ಪತ್ರ ವಾಚಿಸಿದರು. ಸತೀಶ್‌ ಕುಮಾರ್‌ ಪುಂಡಿಕಾç ಕಾರ್ಯಕ್ರಮ ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next